ಜು.31: ನೆರೆಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ: ಕೆ.ಹರೀಶ್ ಕುಮಾರ್

ಮಂಗಳೂರು, ಆ.27: ದ.ಕ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಜು.31ರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜು.31ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ, ಬಳಿಕ ಪಚ್ಚನಾಡಿಗೆ ತೆರಳಲಿದ್ದಾರೆ. ನಂತರ ಅಪರಾಹ್ನ 3 ಗಂಟೆಗೆ ಪುರಭವನದಲ್ಲಿ ಆಯೋಜಿಸಲಾಗಿರುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಸಂತ್ರಸ್ತರಿಗೆ ಇನ್ನಷ್ಟು ನೆರವಾಗುವಂತೆ ಪ್ರೇರಣೆ ನೀಡಲಿ ದ್ದಾರೆ. ಸಮಾವೇಶಕ್ಕೆ ಸರ್ವ ಸಿದ್ಧತೆ ನಡೆಸಲಾಗುತ್ತಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆ.ಹರೀಶ್‌ಕುಮಾರ್ ಹೇಳಿದರು.
ಸಮಾವೇಶದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಮುಂಚೂಣಿ ಫಟಕಗಳ ಸದಸ್ಯರು, ನಗರಸಭೆ, ಪುರಸಭೆ, ಮನಪಾ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ ಎಂದರು.
ಸಿದ್ಧತಾ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮಾತನಾಡಿದರು.
ಕಾಂಗ್ರೆಸ್ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮಿಥುನ್ ರೈ, ಧನಂಜಯ ಅಡ್ಪಂಗಾಯ, ಶಶಿಧರ್ ಹೆಗ್ಡೆ, ಶಾಲೆಟ್ ಪಿಂಟೊ, ಅಶ್ರಫ್ ಸೇವಾದಳ, ಪಿ.ವಿ. ಮೋಹನ್, ಎಂ.ಎಸ್. ಮುಹಮ್ಮದ್, ಮಮತಾ ಗಟ್ಟಿ, ನವೀನ್ ಆರ್. ಡಿಸೋಜ, ಕವಿತಾ ಸನಿಲ್, ಬಿ.ಎಂ. ಭಾರತಿ, ಹಾಜಿ ಟಿ.ಎಸ್. ಅಬ್ದುಲ್ಲಾ, ಹೇಮನಾಥ್ ಶೆಟ್ಟಿ, ಮುಹಮ್ಮದ್ ಮಲಾರ್ ಮೋನು, ಚಂದ್ರಹಾಸ್ ಕರ್ಕೇರಾ, ಗಣೇಶ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಮುಹಮ್ಮದ್ ಬಡಗನ್ನೂರು, ಮುರಳೀಧರ್ ರೈ, ಜಯಪ್ರಕಾಶ್ ರೈ, ಧನಂಜಯ ಮಟ್ಟು, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸುರೇಂದ್ರ ಬಿ. ಕಂಬಳಿ, ಬೇಬಿ ಕುಂದರ್, ವಲೇರಿಯನ್ ಸಿಕ್ವೇರಾ, ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.
ಕೆ.ಕೆ ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು. ಪ್ರ.ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ವಕ್ತಾರ ಖಾಲಿದ್ ಉಜಿರೆ ಸಹಕರಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಫಲಾನುಭವಿಯೋರ್ವರಿಗೆ 25 ಸಾವಿರ ರೂ. ಚೆಕ್ ಹಸ್ತಾಂತರಿಸಲಾಯಿತು.







