ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಐವರಿಗೆ ಗಾಯ

ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್ ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು ಕಾರಿನಲ್ಲಿದ್ದ 5 ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಆತೂರು ನಿವಾಸಿಗಳಾದ ಕಾರು ಚಾಲಕ ಅಬೂಬಕ್ಕರ್, ಅವರ ಮನೆಯವರಾದ ಸಾಜಿದಾ, ಅಲೀಫಾ, ಕೈರುನ್ನೀಸಾ ಹಾಗೂ 4 ವರ್ಷದ ಪುಟ್ಟ ಬಾಲಕ ಸಿಯಾನ್ ಗಾಯಗೊಂಡವರು. ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





