ಬಂಟ್ವಾಳ ಎಸ್‍ವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ, ಆ. 27: ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವವಾದುದು ಎಂದು ಪ್ರೊ. ಮಧೂರು ಮೋಹನ ಕಲ್ಲೂರಾಯರು ಹೇಳಿದರು.
ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಚಿಂತನೆ ಬೆಳೆಯಲು ಪ್ರೇರಣೆ ನೀಡಬೇಕು. ಯುವಜನಾಂಗದಲ್ಲಿ ಸಾಹಿತ್ಯಾಭಿರುಚಿಯನ್ನು ಬೆಳೆಸಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಬಂಟ್ವಾಳ ಎಸ್‍ವಿಎಸ್ ಪ.ಪೂ ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಕನ್ನಡ ಸಂಘದ ಕಾರ್ಯದರ್ಶಿ ಸ್ವಾತಿ ಹೊಳ್ಳ, ಉಪನ್ಯಾಸಕರಾದ ಚೇತನ್ ಮುಂಡಾಜೆ, ಮನೋಹರ್ ಶಾಂತಪ್ಪ ದೊಡ್ಡಮನಿ, ಕಿಟ್ಟು ಕೆ. ರಾಮಕುಂಜ ಮತ್ತಿತ್ತರರು ಉಪಸ್ಥಿತರಿದ್ದರು.
ಕನ್ನಡ ಸಂಘದ ಅಧ್ಯಕ್ಷೆ ಮತ್ತು ಕನ್ನಡ ಉಪನ್ಯಾಸಕಿ ಅಪರ್ಣ ಸ್ವಾಗತಿಸಿ, ವಿದ್ಯಾರ್ಥಿನಿ ಲಿಖಿತಾ ಎನ್. ವಂದಿಸಿದರು. ಕನ್ನಡ ಸಂಘದ ಉಪ ಕಾರ್ಯದರ್ಶಿ ಶ್ರೇಯಾ ಎಚ್. ಕಾರ್ಯಕ್ರಮ ನಿರೂಪಿಸಿದರು.







