ಬಂಟ್ವಾಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಫಲಿತಾಂಶ

ಬಂಟ್ವಾಳ, ಆ. 27: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜು ಪ್ರಥಮ ಮತ್ತು ಬಂಟ್ವಾಳ ಎಸ್‍ವಿಎಸ್ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜು ಪ್ರಥಮ ಮತ್ತು ಮೆಲ್ಕಾರು ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.
ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ರೋಹಿತ್ ಮಾರ್ಲ ಮತ್ತು ಮಂಗಳೂರು ಕೆಪಿಟಿ ಯ ಉಪನ್ಯಾಸಕ ಭಾಸ್ಕರ ವಿಟ್ಲ ಭಾಗವಹಿಸಿದ್ದರು.
ವಿಠಲ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಮೆಲ್ಕಾರು ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ಅಝೀಝ್, ಬಂಟ್ವಾಳ ಎಸ್‍ವಿಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಂದರ್ ಉಪಸ್ಥಿತರಿದ್ದರು. ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ಕಾರ್ಯಕ್ರಮ ಸಂಯೋಜಿಸಿದರು.





