Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಾಶ್ರಿತರಿಗೆ ಎಲ್ಲಾ ರೀತಿಯ ನೆರವು...

ನಿರಾಶ್ರಿತರಿಗೆ ಎಲ್ಲಾ ರೀತಿಯ ನೆರವು ನೀಡಲು ಸರಕಾರ ಸಿದ್ದ: ಯಡಿಯೂರಪ್ಪ

ಚಿಕ್ಕಮಗಳೂರು ಜಿಲ್ಲೆಯ ನೆರೆ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Aug 2019 10:48 PM IST
share
ನಿರಾಶ್ರಿತರಿಗೆ ಎಲ್ಲಾ ರೀತಿಯ ನೆರವು ನೀಡಲು ಸರಕಾರ ಸಿದ್ದ: ಯಡಿಯೂರಪ್ಪ

ಚಿಕ್ಕಮಗಳೂರು, ಆ.27: ಜಿಲ್ಲೆಯ ಮೂಡಿಗೆರೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಭೂ ಕುಸಿತ ಉಂಟಾಗಿ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರ ನೆರವಿಗೆ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತ್ರಸ್ತರಿಗೆ ಭರವಸೆ ನೀಡಿದ್ದಾರೆ.

ಮಂಗಳವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರೀ ಮಳೆಯಿಂದ ಭೂ ಕುಸಿತದಿಂದ ಭಾರೀ ಹಾನಿಗೊಳಗಾಗಿರುವ ಮಲೆ ಮನೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಸಂತ್ರಸ್ತರ ನೋವು ಆಲಿಸಿದ ಅವರು, ಮಲೆನಾಡಿನಲ್ಲಿ ಭೂ ಕುಸಿತದಿಂದ ಭಾರಿ ಅನಾಹುತ ಉಂಟಾಗಿದೆ. ಮನೆ ಮಠ ಜಮೀನುಗಳು ಗುರುತಿಸಲಾಗದ ರೀತಿಯಲ್ಲಿ ನಾಶವಾಗಿದೆ. ಇಡೀ ಗ್ರಾಮವೇ ನಾಶವಾಗಿದೆ. ಈ ಗ್ರಾಮಗಳ ಸಂತ್ರಸ್ತರ ಪುನರ್ವಸತಿಗೆ ಸರಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದರು.

ಭಾರೀ ಪ್ರಮಾಣದ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಆಸ್ತಿ, ಪಾಸ್ತಿ ನಷ್ಟ ಉಂಟಾಗಿದೆ. ಈ ನಷ್ಟದ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತಂದಿದ್ದೇವೆ. ರಾಜ್ಯ ಸರಕಾರದ ಮನವಿ ಮೇರೆಗೆ ಈಗಾಗಲೇ ಕೇಂದ್ರದ ಒಂದು ತಂಡ ರಾಜ್ಯ ಆಗಮಿಸಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೂ ಕೂಡ ಕೇಂದ್ರ ಸರಕಾರದ ಅತೀವೃಷ್ಟಿ ಪರಿಶೀಲನಾ ತಂಡವನ್ನು ಕಳಿಸಿಕೊಡುವುದಾಗಿ ಭರವಸೆ ನೀಡಿದರು. ಅತಿವೃಷ್ಟಿ ವೇಳೆ ಅಧಿಕಾರಿಗಳು, ಜಿಲ್ಲಾಡಳಿತ ಉತ್ತಮವಾಗಿ ಕೆಲಸ ನಿರ್ವಹಿಸಿ ಸಂಭವಿಸಲಿದ್ದ ಸಾವು, ನೋವುಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾಡಳಿತ ಕಾರ್ಯವನ್ನು ಅಭಿನಂದಿಸುತ್ತೇನೆ ಎಂದ ಅವರು, ತತಕ್ಷಣಕ್ಕೆ ಸಂತ್ರಸ್ತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಸರಕಾರದಿಂದ ಅಗತ್ಯ ಇರುವ ನೆರವು ನೀಡುತ್ತಿದೆ. ಈ ಭಾಗಕ್ಕೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಚಿಂತಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ತಾನೂ ಸೇರಿದಂತೆ ಮಂತ್ರಿಗಳು ಹಗಲಿರುಳೆನ್ನದೇ ನಿರಾಶ್ರಿತರ ಬದುಕು ಕಟ್ಟಲು ಶ್ರಮಿಸುತ್ತಿದ್ದೇವೆ. ಸರಕಾರದ ಬಳಿ ಹಣದ ಕೊರತೆ ಇಲ್ಲ. ಎಷ್ಟೇ ಹಣ ಬೇಕಾದರೂ ಸರಕಾರ ನೀಡಲು ಸಿದ್ಧವಿದೆ ಎಂದರು.

ಕೇಂದ್ರ ಸರಕಾರವೂ ರಾಜ್ಯದ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ನೆರವು ನೀಡಲು ಮುಂದಾಗಿದೆ. ಮಲೆನಾಡಿನಲ್ಲಿ ಭೂ ಕುಸಿತದಿಂದ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರು ಮರಳಿ ಈ ಗ್ರಾಮಗಳಲ್ಲಿ ತಮ್ಮ ಬದುಕು ಕಟ್ಟಿಕೊಳ್ಳು ಸಾಧ್ಯವಿಲ್ಲ ಎಂಬ ಮಾಹಿತಿ ಇದೆ. ಆದ್ದರಿಂದ ಈ ಜಮೀನನ್ನು ಸರಕಾರಕ್ಕೆ ನೀಡುತ್ತೇವೆ. ನಮಗೆ ಪರ್ಯಾಯ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದಾರೆಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗಳ ಗಮನಕ್ಕೆ ಇದೇ ವೇಳೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿಯ ಕ್ರಮಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನಕ್ಕೆ ಬರುತ್ತೇನೆಂದು ತಿಳಿಸಿದರು.

ನೆರೆ ಸಂತ್ರಸ್ತರ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ವಿರೋಧ ಪಕ್ಷದವರು ಬೇಡಿಕೆ ಇಟ್ಟಿದ್ದಾರೆಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಅಧಿವೇಶನ ಕರೆದು ಚರ್ಚಿಸಲು ನಮ್ಮ ಅಭ್ಯಂತರವಿಲ್ಲ. ಮುಂದಿನ ದಿನಗಳಲ್ಲಿ ವಿಶೇಷ ಅಧಿವೇಶನ ಕರೆದು ಈ ಸಂಬಂಧ ಚರ್ಚಿಸುವುದಾಗಿ ಹೇಳಿದರು.

ಸಿಎಂ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಸಿ.ಟಿ. ರವಿ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ, ಶೃಂಗೇರಿಯ ಮಾಜಿ ಶಾಸಕ ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ಅಶ್ವತಿ, ಎಸ್ಪಿ ಹರೀಶ್ ಪಾಂಡೆ, ಗ್ರಾಮಸ್ಥರು ಸೇರಿದಂತೆ ಅನೇಕರು ಈ ವೇಳೆ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂ ಕುಸಿತದಿಂದ ಉಂಟಾಗಿರುವ ಹಾನಿಯ ಪರಿಶೀಲನೆಗೆ ಭೇಟಿ ನೀಡುವ ಸುದ್ದಿ ತಿಳಿಯುತ್ತಿದ್ದಂತೆ ಮಲೆಮನೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ಮಲೆಮನೆ ಗ್ರಾಮದಲ್ಲಿ ಸೇರಿದ್ದರು. ಸಿಎಂ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಮನೆ ಮಠ ಕಳೆದುಕೊಂಡ ಸಂತ್ರಸ್ತರು ತಮಗೊಂದು ಶಾಶ್ವತವಾದ ನೆಲ, ಬದುಕು ಕಟ್ಟಿಕೊಡುವಂತೆ ಸಿಎಂ ಎದುರು ಅಂಗಲಾಚಿದ, ಕಣ್ಣೀರು ಸುರಿಸಿ ಬೇಡುತ್ತಿದ್ದ ದೃಶ್ಯ ಮನಕಲುಕುವಂತಿತ್ತು. ಈ ಸಂದರ್ಭದಲ್ಲಿ ಮಲೆಮನೆ ಗ್ರಾಮ ಸಮೀಪದ ಮೇಗೂರು ಗ್ರಾಮದ ನಿವಾಸಿ ಜಯಂತ್ ಎಂಬವರು ಸಿಎಂ ಎದುರು ಕಣ್ಣೀರಿಡುತ್ತಾ, ಮೇಗೂರು ಗ್ರಾಮದಲ್ಲಿ 8 ಮನೆಗಳು ನೆಲಸಮವಾಗಿವೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಳ್ಳದ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ಗ್ರಾಮಕ್ಕೆ ಸಂಪರ್ಕ ಇಲ್ಲದಂತಾಗಿದೆ. ಮನೆ ಮಠ ಕಳೆದುಕೊಂಡು ಗ್ರಾಮಸ್ಥರು ಅನಾಥರಾಗಿದ್ದರೂ ಇದುವರೆಗೂ ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ. ದಾನಿಗಳು ನೀಡಿದ ನೆರವನ್ನು ಅಧಿಕಾರಿಗಳು ಮೇಗೂರು ಗ್ರಾಮಕ್ಕೆ ತಲುಪಿಸಿಯೇ ಇಲ್ಲ. ಮಲೆಮನೆ ಗ್ರಾಮದಲ್ಲಿ ಹೆಚ್ಚು ಮನೆಗಳಿಗೆ ಹಾನಿಯಾಗಿಲ್ಲ. ಆದರೆ ಮೇಗೂರು ಗ್ರಾಮದಲ್ಲಿ ಭಾರೀ ಹಾನಿಯಾಗಿದ್ದರೂ ಯಾವ ಅಧಿಕಾರಿಗಳೂ ಸ್ಥಳಕ್ಕೆ ಬಂದಿಲ್ಲ. ಅಲ್ಲಿನ ನಿವಾಸಿಗಳು ಗಂಜಿಕೇಂದ್ರಕ್ಕೂ ಬರಲು ಸಾಧ್ಯವಾಗಿಲ್ಲ. ನಮಗೆ ಸಿಎಂ ಅಗತ್ಯ ನೆರವು ನೀಡಬೇಕು. ನಿರ್ಗತಿಕರಾಗಿರುವ ನಮಗೆ ನೆರವು ನೀಡಬೇಕೆಂದು ಅಂಗಲಾಚುತ್ತಿದ್ದ ದೃಶ್ಯ ಕರುಳು ಹಿಂಡುವಂತಿತ್ತು.

ಗರಂ ಆದ ಸಿಎಂ: ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ, ಖಾತೆ ಹಂಚಿಕೆಯ ಅಸಮಾಧಾನವಿದೆಯಾ ಎಂಬ ಸುದ್ದಿಗಾರರ ಪ್ರಶ್ನೆಗೆ ಗರಂ ಆದ ಸಿಎಂ, ಈ ಬಗ್ಗೆ ಮಾತನಾಡಲು ಇದು ಸಂದರ್ಭವೇ ? ನಾವು ನೆರೆ ಸಂತ್ರಸ್ತರ ನೋವು ಆಲಿಸಲು ಬಂದಿದ್ದೇವೆ ಎಂದು ಸಿಡಿಮಿಡಿಗೊಂಡು ಪ್ರತಿಕ್ರಿಯಿಸಿದರು.

ಕೇವಲ 18 ನಿಮಿಷ ಮಳೆ ಹಾನಿ ವೀಕ್ಷಿಸಿದ ಸಿಎಂ
ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿಯ ಪರಿಶೀಲನೆಗೆ ಮಂಗಳವಾರ ಜಿಲ್ಲೆಗೆ ಆಗಮಿಸಬೇಕಾಗಿದ್ದ ಸಿಎಂ ಹೆಲಿಕಾಪ್ಟರ್ ಮೂಲಕ ಮೂಡಿಗೆರೆಗೆ ಆಗಮಿಸುವುದಾಗಿ ಪೂರ್ವ ನಿಗದಿಯಾಗಿತ್ತು. ಆದರೆ ತಾಲೂಕಿನಾದ್ಯಂತ ಪ್ರತಿಕೂಲ ಹವಾಮಾನದಿಂದಾಗಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದರು. ನಂತರ ರಸ್ತೆ ಮಾರ್ಗದ ಮೂಲಕ ಮಲೆಮನೆ ಗ್ರಾಮಕ್ಕೆ 3 ಗಂಟೆ 9 ನಿಮಿಷಕ್ಕೆ ಆಗಮಿಸಿದ್ದರು. ಬಳಿಕ ಕೇವಲ 18 ನಿಮಿಷಗಳ ಕಾಲ ಸಿಎಂ ಮಲೆಮನೆ ಗ್ರಾಮದಲ್ಲಿ ಆದ ಹಾನಿಯನ್ನು ದೂರದಿಂದ ವೀಕ್ಷಿಸಿ ಬೆಂಗಳೂರಿಗೆ ಹಿಂದಿರುಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X