Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮುಖ್ಯ...

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ರಾಮ ಪಿ.ಸಾಲ್ಯಾನ್ ನಿಧನ

ವಾರ್ತಾಭಾರತಿವಾರ್ತಾಭಾರತಿ28 Aug 2019 6:41 PM IST
share
ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ರಾಮ ಪಿ.ಸಾಲ್ಯಾನ್ ನಿಧನ

ಬಂಟ್ವಾಳ, ಆ. 28: ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಪುಂಜಾಲಕಟ್ಟೆ ನಿವಾಸಿ ಬಂಟ್ವಾಳ ತಾಲೂಕಿನ ಉಳಿ, ಕಕ್ಯಪದವು ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪದವೀಧರ ಮುಖ್ಯ ಶಿಕ್ಷಕ ರಾಮ ಪಿ.ಸಾಲ್ಯಾನ್ (56) ಅವರು  ಹೃದಯಾಘಾತದಿಂದ ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಶಿಕ್ಷಕಿ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರನನ್ನು ಅಗಲಿದ್ದಾರೆ. 

ಅವರು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ, ಕೊಯ್ಯೂರು, ನಾಳ ಸಹಿತ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಅವರ ಗಮನಾರ್ಹ ಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿತ್ತು. ಉತ್ತಮ ಚಿತ್ರಕಾರರಾಗಿದ್ದ ಅವರು, ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ರೋತ್ಸಾಹ ನೀಡುತ್ತಿದ್ದರು. ಶಿಕ್ಷಕರ ದಿನಾಚರಣೆಗಾಗಿ ನಡೆಯುವ ಸಾಂಸ್ಕೃತಿಕ ಮತ್ತಿತರ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆಯುತ್ತಿದ್ದರು. ಕಬಡ್ಡಿ ರಾಜ್ಯ ಮಟ್ಟದ ತೀರ್ಪುಗಾರರಾಗಿದ್ದರು. ಕಂಬಳ ಪ್ರೇಮಿಯಾಗಿದ್ದ ಅವರು, ಸ್ವತ: ಓಟದ ಕೋಣಗಳನ್ನು ಹೊಂದಿದ್ದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನ ಸದಸ್ಯರಾಗಿದ್ದು, ತಾಂಬೂಲ ಕಲಾವಿದರು ನಾಟಕ ತಂಡದ ಗೌರವ ಸಲಹೆಗಾರರಾಗಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಮಟ್ಟದ ತರಬೇತಿದಾರರಾಗಿದ್ದರು. ಪುಂಜಾಲಕಟ್ಟೆ-ಮಡಂತ್ಯಾರು ಲಯನ್ಸ್ ಕ್ಲಬ್‍ನ ಸದಸ್ಯರಾಗಿದ್ದರು. 

ಬಸವರತ್ನ ಪ್ರಶಸ್ತಿ, ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ, ಸೌರಭ ರತ್ನ ರಾಜ್ಯ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸಮ್ಮಾನಗಳು ಅವರಿಗೆ ಲಭಿಸಿದ್ದವು.

ಸಂತಾಪ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಪಂ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ಕಕ್ಯಪದವು ಗರಡಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ರಮೇಶ್ ನಾಯಕ್ ರಾಯಿ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ  ಬೇಬಿ ಕುಂದರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎಸ್ಸಿ-ಎಸ್ಟಿ ಸಂಘದ ಜಿಲ್ಲಾಧ್ಯಕ್ಷ ಆಂಜನೇಯ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ಮೋನಪ್ಪ ಕೆ., ಯುವಜನ ಕ್ರೀಡೆ ಸಬಲೀಕರಣ ಅಧಿಕಾರಿ ನವೀನ್ ಪಿ.ಎಸ್., ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು. ಮೃತರ ಶೋಕಾರ್ಥ ಕಕ್ಯಪದವು ಶಾಲೆಗೆ ರಜೆ ಸಾರಲಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X