ಸೆ.1ಕ್ಕೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನಿಂದ ವಿದ್ಯಾರ್ಥಿವೇತನ, ಆರೋಗ್ಯ ಕಾರ್ಡ್ ವಿತರಣೆ
ಉಡುಪಿ, ಆ.28: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಸೆ.1ರ ರವಿವಾರ ಬೆಳಿಗ್ಗೆ 10:00 ಗಂಟೆಗೆ ಕುಂದಾಪುರದ ರೋಟರಿ ಕಲಾ ಮಂದಿರದಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಲಿದ್ದು, ಮಡಿಕೇರಿ ಸಹಾಯಕ ಫಾರೆಸ್ಟ್ ರೇಂಜ್ ಅಧಿಕಾರಿ ಶಮಾನ್ ಕ್ಯಾಸ್ತಲಿನೊ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಬೈನ ಜಾನ್ ಡಿಸಿಲ್ವಾ ಫೌಂಡೇಶನ್‌ನ ಅಧ್ಯಕ್ಷ ಜಾನ್ ಡಿಸಿಲ್ವಾ, ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂ. ಸ್ಟ್ಯಾನಿ ತಾವ್ರೊ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನ ಆಧ್ಯಾತ್ಮಿಕ ನಿರ್ದೇಶಕರಾದ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನ ನಿರ್ಗಮನ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಪ್ರಕಟಣೆಯಲ್ಲಿ ತಿಳಿಸಿದೆ.
Next Story





