Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ವಿರುದ್ಧ ಪುರಾವೆಯಿದ್ದರೆ...

ನನ್ನ ವಿರುದ್ಧ ಪುರಾವೆಯಿದ್ದರೆ ಆರೋಪಪಟ್ಟಿ ದಾಖಲಿಸಲಿ: ಕಾರ್ತಿ ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ28 Aug 2019 9:22 PM IST
share
ನನ್ನ ವಿರುದ್ಧ ಪುರಾವೆಯಿದ್ದರೆ ಆರೋಪಪಟ್ಟಿ ದಾಖಲಿಸಲಿ: ಕಾರ್ತಿ ಚಿದಂಬರಂ

ಹೊಸದಿಲ್ಲಿ, ಆ.28: ತನ್ನ ವಿರುದ್ಧದ ಆರೋಪಕ್ಕೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳ ಬಳಿ ಪುರಾವೆಗಳಿದ್ದರೆ ಆರೋಪ ಪಟ್ಟಿ ದಾಖಲಿಸಲಿ ಎಂದು ಮಾಜಿ ವಿತ್ತಸಚಿವ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸವಾಲೆಸೆದಿದ್ದಾರೆ.

ಕಾರ್ತಿ ಚಿದಂಬರಂ ವಿದೇಶದಲ್ಲಿ ಬೇನಾಮಿ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂಬ ತನಿಖಾ ಸಂಸ್ಥೆಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಾರ್ತಿ, ಅವರು ಕೆಲವು ವಿಲಕ್ಷಣ ಸ್ಥಳಗಳ ಹೆಸರನ್ನು ಉಲ್ಲೇಖಿಸಿದ್ದಾರೆ.

“ನಾನೋರ್ವ ಸಂಸದ. ನಾಮಪತ್ರ ಸಲ್ಲಿಸುವ ಮುನ್ನ ನನ್ನ ಆಸ್ತಿ ವಿವರ ನೀಡಿದ್ದೇನೆ. ನನ್ನ ವಿರುದ್ಧ ಅವರಲ್ಲಿ ಸಾಕ್ಷಿಗಳಿದ್ದರೆ ಅವರೇಕೆ ಆರೋಪ ಪಟ್ಟಿ ದಾಖಲಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ(ಎಫ್‌ಐಪಿಬಿ)ಯಿಂದ ಅನುಮತಿ ದೊರಕಿಸಿಕೊಡಲು ಪಡೆದ ಲಂಚದ ಹಣವನ್ನು ಹಲವು ಬೇನಾಮಿ ಸಂಸ್ಥೆಗಳ ಮೂಲಕ ಕಾರ್ತಿ ವಿದೇಶಕ್ಕೆ ಅಕ್ರಮವಾಗಿ ವರ್ಗಾಯಿಸಿದ್ದಾರೆ. ಇದರಲ್ಲಿ ಒಂದು ಸಂಸ್ಥೆಯಾಗಿರುವ ‘ಅಡ್ವಾಂಟೇಜ್ ಸ್ಟ್ರಟೆಜಿಕ್ ಕನ್ಸಲ್ಟೆನ್ಸಿ ಪ್ರೈ.ಲಿ(ಎಎಸ್‌ಸಿಪಿಎಲ್) ಕಾರ್ತಿ ಚಿದಂಬರಂ ಅವರ ವಿದೇಶಿ ಪ್ರವಾಸದ ಸಂದರ್ಭದ ಆಹಾರ ವೆಚ್ಚವನ್ನು ಭರಿಸಿದೆ. ಅಲ್ಲದೆ 2014ರಲ್ಲಿ ವಿದೇಶದಲ್ಲಿ ಹೋಟೆಲ್ ವಾಸ್ತವ್ಯದ ಖರ್ಚು, 2013ರಲ್ಲಿ ವಿಂಬಲ್ಡನ್ ಟೂರ್ನಿ ಹಾಗೂ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯ ಟಿಕೆಟ್‌ಗೆ ಈ ಸಂಸ್ಥೆಯೇ ಹಣ ಪಾವತಿಸಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

 ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ತಿ, “ನನಗೆ ವಿದೇಶದಲ್ಲಿ ಮಿತ್ರರಿದ್ದಾರೆ ಮತ್ತು ವಿದೇಶದ ಪ್ರವಾಸದ ವೆಚ್ಚವನ್ನು ಅವರು ಭರಿಸಿದ್ದಾರೆ. ಅಷ್ಟಕ್ಕೇ ನಾನು ಅವರ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದೇನೆ ಎಂದು ಹೇಳಲಾದೀತೇ ಎಂದುತ್ತರಿಸಿದರು.” ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಎಫ್‌ಐಪಿಬಿಯಿಂದ ಅನುಮತಿ ಪಡೆಯಲು ತಾನು ಕಾರ್ತಿ ಚಿದಂಬರಂ ನೆರವು ಪಡೆದಿದ್ದೆ ಮತ್ತು ಅವರು ತನ್ನ ತಂದೆ ಹಾಗೂ ಆಗ ವಿತ್ತ ಸಚಿವರಾಗಿದ್ದ ಚಿದಂಬರಂ ಅವರೊಂದಿಗೆ ಭೇಟಿಗೆ ವ್ಯವಸ್ಥೆ ಮಾಡಿದ್ದರು ಎಂಬ ಇಂದ್ರಾಣಿ ಮುಖರ್ಜಿ ಹೇಳಿಕೆಯ ಬಗ್ಗೆ ಉತ್ತರಿಸಿದ ಕಾರ್ತಿ, “ನನ್ನ ಜೀವನದಲ್ಲಿ ಇದುವರೆಗೆ ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ. 10 ಲಕ್ಷ ರೂ. ಲಂಚ ಪಡೆದಿರುವ ಆರೋಪ ಅಸಂಬದ್ಧವಾಗಿದೆ. ಇದನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ಹೇಳಿದ್ದೇನೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X