Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಭಾರತೀಯರಲ್ಲೇ ಹೃದ್ರೋಗಗಳೇಕೆ ಹೆಚ್ಚು?

ಭಾರತೀಯರಲ್ಲೇ ಹೃದ್ರೋಗಗಳೇಕೆ ಹೆಚ್ಚು?

ವಾರ್ತಾಭಾರತಿವಾರ್ತಾಭಾರತಿ28 Aug 2019 10:16 PM IST
share
ಭಾರತೀಯರಲ್ಲೇ ಹೃದ್ರೋಗಗಳೇಕೆ ಹೆಚ್ಚು?

ಕೊರೊನರಿ ಹಾರ್ಟ್ ಡಿಸೀಸ್ ಅಥವಾ ಪರಿಧಮನಿ ಹೃದಯ ರೋಗ (ಸಿಎಚ್‌ಡಿ)ವು ವಿಶ್ವಾದ್ಯಂತ ಸಾವುಗಳಿಗೆ ಪ್ರಮುಖ ಕಾರಣವಾಗಿದ್ದು,ವಾರ್ಷಿಕ 70 ಲಕ್ಷಕ್ಕೂ ಅಧಿಕ ಜನರು ಅದಕ್ಕೆ ಬಲಿಯಾಗುತ್ತಿದ್ದಾರೆ.

ಹೃದಯಕ್ಕೆ ರಕ್ತವನ್ನು ಸಾಗಿಸುವ ಅಪಧಮನಿಗಳಲ್ಲಿ ಅಧಿಕ ಕೊಬ್ಬು ಸಂಗ್ರಹಗೊಂಡು ಅವು ಸಂಕುಚಿತಗೊಳ್ಳುವ ಸ್ಥಿತಿಯನ್ನು ಸಿಎಚ್‌ಡಿ ಎಂದು ಕರೆಯಲಾಗುತ್ತದೆ ಮತ್ತು ಇದು ಹೃದಯಾಘಾತಕ್ಕೆ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ.

ಗ್ರಾಮೀಣ ಜನರಿಗೆ ಹೋಲಿಸಿದರೆ ನಗರವಾಸಿಗಳು ಸಿಎಚ್‌ಡಿ ಗೆ ಗುರಿಯಾಗುವ ಸಾಧ್ಯತೆ ಶೇ.100ರಷ್ಟು ಹೆಚ್ಚಾಗಿದೆ. ಸದ್ಯ ಭಾರತದಲ್ಲಿ ಮೂರು ಕೋಟಿಗೂ ಅಧಿಕ ಸಿಎಚ್‌ಡಿ ರೋಗಿಗಳಿದ್ದು,2020ರ ವೇಳೆಗೆ 1.44 ಕೋಟಿ ಪುರುಷರು ಮತ್ತು 77 ಲಕ್ಷ ಮಹಿಳೆಯರು ಈ ರೋಗಕ್ಕೆ ಬಲಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಭಾರತೀಯರಲ್ಲಿ ಹೃದ್ರೋಗಗಳು ಮತ್ತು ಹೃದಯಾಘಾತಗಳ ಅಪಾಯ ಹೆಚ್ಚಾಗಿರುವುದಕ್ಕೆ ಕಾರಣಗಳಿಲ್ಲಿವೆ....

ಭಾರತೀಯರಲ್ಲಿ ಸಿಎಚ್‌ಡಿ ಕುರಿತು ನಡೆಸಲಾದ ಅಧ್ಯಯನಗಳು ಈ ರೋಗಗಳಿಗೆ ಗುರಿಯಾಗುವ ಅಪಾಯ ಯುವಜನರಲ್ಲಿ ಹೆಚ್ಚು ಎನ್ನುವುದನ್ನು ಬೆಟ್ಟು ಮಾಡಿವೆ. ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ, ಧೂಮ್ರಪಾನ, ಕಳಪೆ ಆಹಾರ ಸೇವನೆ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಇವು ಈ ಅಪಾಯಕ್ಕೆ ಕಾರಣಗಳಲ್ಲಿ ಸೇರಿವೆ. ಜೊತೆಗೆ ವಂಶವಾಹಿಯೂ ಸಿಎಚ್‌ಡಿಗೆ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ.

► ಮಧುಮೇಹ

7.20 ಕೋಟಿಗೂ ಅಧಿಕ ಮಧುಮೇಹ ರೋಗಿಗಳಿರುವ ಭಾರತವು ವಿಶ್ವ ಮಧುಮೇಹ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. 2025ರ ವೇಳೆಗೆ ಇಂತಹವರ ಸಂಖ್ಯೆ 12 ಕೋಟಿಯನ್ನು ಮೀರಲಿದೆ ಎಂದು ಅಂದಾಜಿಸಲಾಗಿದೆ.

ಗ್ರಾಮೀಣ ಪ್ರದೇಶಗಳಿಗೆ (ಶೇ.3.8) ಹೋಲಿಸಿದರೆ ನಗರ ಪ್ರದೇಶದ ವಯಸ್ಕರಲ್ಲಿ ಮಧುಮೇಹಕ್ಕೆ ತುತ್ತಾಗುವವರ ಪ್ರಮಾಣ ಶೇ.11.8ರಷ್ಟಿದೆ.

ರಕ್ತದಲ್ಲಿ ಅಧಿಕ ಸಕ್ಕರೆ ಮಟ್ಟಕ್ಕೆ ಕಾರಣವಾಗುವ ಮಧುಮೇಹ ಹೃದಯಕ್ಕೆ ರಕ್ತವನ್ನು ಪೂರೈಸುವ ರಕ್ತನಾಳಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಕಾಲಕ್ರಮೇಣ ಅದು ಅಪಧಮನಿಗಳಲ್ಲಿ ತಡೆಯನ್ನುಂಟು ಮಾಡುವ ಜೊತೆಗೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ವಾಸ್ತವದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ವಯಸ್ಕ ಮಧುಮೇಹಿಗಳಲ್ಲಿ ಸಾವಿಗೆ ಪ್ರಮುಖ ಕಾರಣಗಳಾಗಿವೆ. ಅಲ್ಲದೆ ರೋಗಿಯು ಮಧುಮೇಹದಿಂದ ಎಷ್ಟು ದೀರ್ಘಕಾಲದಿಂದ ಬಳಲುತ್ತಿದ್ದಾನೋ ಹೃದ್ರೋಗಕ್ಕೆ ಗುರಿಯಾಗುವ ಅಪಾಯವೂ ಅಷ್ಟೇ ಹೆಚ್ಚಾಗುತ್ತದೆ. ಹೀಗಾಗಿ ಮಧುಮೇಹಿಗಳು ತಮ್ಮ ರಕ್ತದಲ್ಲಿ ಸಕ್ಕರೆಯ ಮಟ್ಟದ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಮುಖ್ಯವಾಗುತ್ತದೆ.

► ಅಧಿಕ ರಕ್ತದೊತ್ತಡ

 ಮಧುಮೇಹದಂತೆ ಅಧಿಕ ರಕ್ತದೊತ್ತಡವೂ ಹೃದ್ರೋಗಗಳು ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡವು ರಕ್ತನಾಳಗಳ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ ಮತ್ತು ಇದು ಕ್ರಮೇಣ ಪರಿಧಮನಿಗಳಿಗೆ ಹಾನಿಯನ್ನುಂಟು ಮಾಡುತ್ತದೆ. ಹೆಚ್ಚಿದ ಒತ್ತಡ ಮತ್ತು ಅಪಧಮನಿಗಳಿಗೆ ಹಾನಿಯು ರಕ್ತನಾಳಗಳು ಇನ್ನಷ್ಟು ಸಂಕುಚಿತಗೊಳ್ಳಲು ಕಾರಣವಾಗುತ್ತವೆ. ಅಪಧಮನಿಗಳಲ್ಲಿ ತಡೆಗಳು ನಿರ್ಮಾಣಗೊಂಡು ರಕ್ತ ಹೆಪ್ಪುಗಟ್ಟುವ ಮತ್ತು ಹೃದಯಾಘಾತ ಉಂಟಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಇದು ಸಿಎಚ್‌ಡಿ,ಹೃದಯದ ಸ್ನಾಯುಗಳು ದಪ್ಪವಾಗುವಿಕೆ ಮತ್ತು ಹೃದಯ ವೈಫಲ್ಯದಂತಹ ಅಪಾಯಗಳಿಗೆ ಕಾರಣವಾುತ್ತದೆ.

► ಧೂಮ್ರಪಾನ

ತಂಬಾಕು ಉತ್ಪಾದನೆ ಮತ್ತು ಬಳಕೆಯಲ್ಲಿ ಭಾರತವು ವಿಶ್ವದಲ್ಲಿ ನಂ.3 ರಾಷ್ಟ್ರವಾಗಿದೆ. ವಿಶ್ವಾದ್ಯಂತ 101 ಕೋಟಿಗೂ ಅಧಿಕ ಜನರು ಧೂಮ್ರಪಾನದ ಚಟವನ್ನು ಹೊಂದಿದ್ದು,ಈ ಪೈಕಿ ಸುಮಾರು 18.20 ಕೋಟಿ ಜನರು ಭಾರತದಲ್ಲಿದ್ದಾರೆ.

 ಧೂಮ್ರಪಾನವು ಸಿಎಚ್‌ಡಿಗೆ ಪ್ರಮುಖ ಕಾರಣಗಳಲ್ಲೊಂದಾಗಿದ್ದು,ಧೂಮ್ರಪಾನಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಇದೆ. ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹಗೊಳ್ಳಲು ಮತ್ತು ಸಿಎಚ್‌ಡಿ ಅಪಾಯವನ್ನು ಹೆಚ್ಚಿಸುವ ಅಪಧಮನಿ ಕಾಠಿಣ್ಯ ರೋಗಕ್ಕೆ ಧೂಮ್ರಪಾನವು ಪ್ರಮುಖ ಕಾರಣವಾಗಿದೆ. ಇತರರಿಗೆ ಹೋಲಿಸಿದರೆ ಧೂಮ್ರಪಾನಿಗಳು ಹೃದ್ರೋಗಗಳಿಂದ ಸಾವನ್ನಪ್ಪುವ ಸಾಧ್ಯತೆ ಎರಡು ಪಟ್ಟು ಹೆಚ್ಚಾಗಿರುತ್ತದೆ.

ಹೃದ್ರೋಗ ಧೂಮ್ರಪಾನವು ಉಂಟುಮಾಡುವ ಅನಾರೋಗ್ಯಗಳಲ್ಲಿ ಒಂದಾಗಿದೆ. ಧೂಮ್ರಪಾನವು ಇತರ ಹಲವಾರು ಕಾಯಿಲೆಗಳಿಗೂ ಕಾರಣವಾಗುತ್ತದೆ. ಹೀಗಾಗಿ ಧೂಮ್ರಪಾನಿಗಳು ತಮ್ಮ ಆರೋಗ್ಯಕ್ಕಾಗಿ ಮತ್ತು ತಮ್ಮ ಕುಟುಂಬಗಳಿಗಾಗಿ ಈ ಚಟವನ್ನು ವರ್ಜಿಸುವುದು ಅಗತ್ಯವಾಗಿದೆ.

► ಜನ್ಮದತ್ತ ದೋಷ

ಭಾರತೀಯರು ಆನುವಂಶಿಕವಾಗಿಯೂ ಹೃದ್ರೋಗಗಳಿಗೆ ಗುರಿಯಾಗುತ್ತಾರೆ. ಕುಟುಂಬದಲ್ಲಿ ಯಾರಾದರೂ ಹೃದ್ರೋಗ ಹೊಂದಿದ್ದರೆ ಇತರರೂ ಕೂಡ ಅದಕ್ಕೆ ಗುರಿಯಾಗುವ ಅಪಾಯ ಹೆಚ್ಚಾಗಿರುತ್ತದೆ. ಆದರೂ ನಿಮ್ಮ ಕುಟುಂಬದ ಇತಿಹಾಸದಲ್ಲಿ ಹೃದ್ರೋಗವಿರಲಿ ಇಲ್ಲದಿರಲಿ,ಮಧುಮೇಹ,ಅಧಿಕ ರಕ್ತದೊತ್ತಡ ಮತ್ತು ಧೂಮ್ರಪಾನ ಚಟ ಇವುಗಳ ಮೇಲೆ ನಿಕಟ ನಿಗಾಯಿರಿಸಿದರೆ ಹೃದ್ರೋಗಗಳಿಗೆ ಗುರಿಯಾಗುವ ಅಪಾಯವನ್ನು ಗಣನೀಯವಾಗಿ ತಗ್ಗಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X