Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಗತಿ ವಿಳಂಬ; ಬಂದರು ಇಲಾಖೆ ಕಾಮಗಾರಿಗಳ...

ಪ್ರಗತಿ ವಿಳಂಬ; ಬಂದರು ಇಲಾಖೆ ಕಾಮಗಾರಿಗಳ ಸ್ಥಳ ಪರಿಶೀಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ30 Aug 2019 9:26 PM IST
share
ಪ್ರಗತಿ ವಿಳಂಬ; ಬಂದರು ಇಲಾಖೆ ಕಾಮಗಾರಿಗಳ ಸ್ಥಳ ಪರಿಶೀಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಆ.30: ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆ ಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗುತಿದ್ದು, ಈ ಬಗ್ಗೆ ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ರಾಜ್ಯ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳ ಪ್ರಗತಿ ಪರಿಶೀಲನಾ ಸೆಯಲ್ಲಿ ಅವರು ಮಾತನಾಡುತಿದ್ದರು.

ಕೊಡೇರಿಯಲ್ಲಿ 33 ಕೋಟಿ ರೂ ವೆಚ್ಚದ ಬ್ರೇಕ್‌ವಾಟರ್ ಕಾಮಗಾರಿ ಜನವರಿ ಅಂತ್ಯದೊಳಗೆ ಮುಗಿಯಬೇಕಿತ್ತು. ಆದರೆ ಈವರೆಗೆ ಕೇವಲ ಶೇ.20 ರಷ್ಟು ಕಾಮಗಾರಿ ಮಾತ್ರ ಮುಗಿದಿದ್ದು, ಇದುವರೆಗೂ ಪ್ರಗತಿ ಕಾಣದ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವ ಪೂಜಾರಿ, ಈ ಕಾಮಗಾರಿ ವಿಳಂಬಕ್ಕ ಕಾರಣಗಳ ಕುರಿತು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುವುದಾಗಿ ಹಾಗೂ ಕಾಮಗಾರಿ ನಿರ್ವಹಿಸದೆ ಇರುವ ಗುತ್ತಿಗೆದಾರರ ಲೈಸೆನ್ಸ್ ರದ್ದು ಮತ್ತು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡುವ ಕುರಿತಂತೆ ವರದಿ ನೀಡುವಂತೆ ಸೂಚಿಸಿದರು.

ಕೋಡಿಕನ್ಯಾನದಲ್ಲಿ ಡ್ರೆಜ್ಜಿಂಗ್ ಮಾಡದೇ ಇರುವುದರಿಂದ ಮೀನುಗಾರಿಕಾ ಬೋಟ್‌ಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ಈ ಪ್ರದೇಶದಲ್ಲಿ ಡ್ರೆಜ್ಜಿಂಗ್ ನಡೆಸಲು ಸಿಆರ್‌ಝಡ್ ನಿಯಮಗಳನ್ವಯ ಅಗತ್ಯ ಅನುಮತಿ ಪಡೆದು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಸಚಿವರು ತಿಳಿಸಿದರು. ಯಾವುದೇ ಕಾಮಗಾರಿ ಆರಂಭಕ್ಕೆ ಮುನ್ನ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಪಡೆದು ಕಾಮಗಾರಿಗಳನ್ನು ಮಾಡಿ, ಇದರಿಂದ ಸಕಾಲದಲ್ಲಿ ಕಾಮಗಾರಿ ಮುಕ್ತಾಯ ಗೊಳಿಸಲು ಸಾಧ್ಯವಾಗಲಿದೆ ಎಂದರು.

ಮಲ್ಪೆ 3ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಅಗತ್ಯ ಸಣ್ಣಪುಟ್ಟ ಕಾರ್ಯಗಳನ್ನು ಪೂರ್ಣಗೊಳಿಸಿ, ಸೆಪ್ಟೆಂಬರ್ ಅಂತ್ಯದೊಳಗೆ ಮೀನುಗಾರಿಕಾ ಇಲಾಖೆಗೆ ಹಸ್ತಾಂತರಿಸುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮರವಂತೆಯಲ್ಲಿ ಕೇರಳ ಮಾದರಿಯ 45 ಕೋಟಿ ರೂ ವೆಚ್ಚದ ಹೊರ ಬಂದರು ನಿರ್ಮಾಣ ಕಾಮಗಾರಿಯ ಮೊದಲ ಹಂತ ಪೂರ್ಣಗೊಂಡಿದ್ದು, ಈ ಕಾಮಗಾರಿ ಮೀನುಗಾರರಿಗೆ ಅನುಪಯುಕ್ತವಾಗಿದೆ. ಇದರ 2ನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುವುದಾಗಿ ಸಚಿವ ಪೂಜಾರಿ ತಿಳಿಸಿದರು.

ಕಡಲ್ಕೊರೆತ, ತಡೆಗೋಡೆ ನಿರ್ಮಾಣ ಮುಂತಾದ ತುರ್ತು ಕಾಮಗಾರಿಗೆ ಜಿಲ್ಲೆಯಲ್ಲಿರುವ ಅನುದಾನಗಳ ಕುರಿತು ಮಾಹಿತಿ ಪಡೆದ ಸಚಿವರು, ಈವರೆಗೆ ಬಂದಿರುವ ಅರ್ಜಿಗಳ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮೀನುಗಾರರಿಗೆ 170 ಕೆ.ಎಲ್. ಸೀಮೆಎಣ್ಣೆ ತರಿಸಲಾಗುತ್ತಿತ್ತು. ಆದರೆ ಜಿಲ್ಲೆಯಲ್ಲಿ 4000ಕ್ಕೂ ಅಧಿಕ ನಾಡದೋಣಿ ಮೀನುಗಾರರು ಇರುವು ದರಿಂದ ಹೆಚ್ಚುವರಿ 300 ಲೀ. ಸೀಮೆಎಣ್ಣೆ ಹೆಚ್ಚಳಕ್ಕೆ ಪ್ರಸ್ಥಾವನೆ ಸಲ್ಲಿಸುವುದಾಗಿ ತಿಳಿಸಿದ ಸಚಿವರು, 300 ಲೀ. ಸೀಮೆಎಣ್ಣೆ ದಾಸ್ತಾನು ಹಾಗೂ ಇತರ ವ್ಯವಸ್ಥೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೀನುಗಾರರ ಉಳಿತಾಯ ಯೋಜನೆಯ ಹಣ ಸಕಾಲದಲ್ಲಿ ಪಾವತಿ ಮಾಡುವ ಬಗ್ಗೆ, ಏಕರೂಪದ ಸಂಕಷ್ಠ ಪರಿಹಾರ ನಿಧಿ ವಿತರಣೆ ಬಗ್ಗೆ, ನಾಡದೋಣಿಗಳ ಎಂಜಿನ್ ಸಬ್ಸಿಡಿ, ಮತ್ಸ್ಯಾಶ್ರಯ ಯೋಜನೆಯ ಕುರಿತು ಸೆಯಲ್ಲಿ ವಿವರವಾಗಿ ಚರ್ಚೆ ನಡೆಯಿತು.
ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ರೀತಿ ವಿಳಂಬ ಮಾಡದೆ, ಪರಸ್ಪರ ಸಮನ್ವಯದಿಂದ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಬಂದರು ಹಾಗೂ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ಗಳನ್ನು ನೀಡಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ರೀತಿ ವಿಳಂಬ ಮಾಡದೆ, ಪರಸ್ಪರ ಸಮನ್ವಯದಿಂದ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಬಂದರು ಹಾಗೂ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ಗಳನ್ನು ನೀಡಿದರು.

ಸಭೆಯಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬಂದರು, ಒಳನಾಡು ಜಲ ಸಾರಿಗೆ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X