ಬಂಟ್ವಾಳ: ಜೀಪ್ - ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಾಯ
ಬಂಟ್ವಾಳ : ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮೇಗಿನ ಪೇಟೆ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ವಿಟ್ಲ ಕಸಬಾ ಗ್ರಾಮದ ಚೆಂದಳಿಕೆ ಸಿಪಿಸಿಆರ್ ಸಮೀಪದ ನಿವಾಸಿ ಅಶ್ವಿನ್ (20) ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ.
ಇವರು ಎಂದಿನಂತೆ ವಿಟ್ಲ ಪೇಟೆಯಿಂದ ಚಂದಳಿಕೆ ಮನೆ ಕಡೆಗೆ ತೆರಳುತ್ತಿದ್ದಾಗ ಮೇಗಿನಪೇಟೆ ಬಳಿ ರಸ್ತೆಗೆ ಕ್ರಾಸ್ ಆಗುತ್ತಿದ್ದ ಜೀಪ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಇವರನ್ನು ವಿಟ್ಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ವಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





