ಮೀನು ಮಾರಾಟ ಫೆಡರೇನ್‌ಗೆ 4.48ಕೋ.ರೂ. ನಿವ್ವಳ ಲಾಭ
ಉಡುಪಿ, ಆ.30: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ 2018-19ನೇ ಸಾಲಿನಲ್ಲಿ 250 ಕೋಟಿ ವ್ಯವಹಾರದ ಮೂಲಕ 4.48 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಮೀನು ಮಾರಾಟ, ಡಿಸೇಲ್ ಮಾರಾಟ, ಬ್ಯಾಂಕಿಂಗ್ ವ್ಯವಹಾರ, ಮೋಬಿಲ್ ಎಣ್ಣೆ ಮಾರಾಟ, ಸೀಮೆಎಣ್ಣೆ ಹಾಗೂ ಮೀನುಗಾರಿಕಾ ಸಲಕರಣೆ ಗಳ ಮಾರಾಟ ಮತ್ತು ಮಂಜುಗಡ್ಡೆ ವ್ಯವಹಾರಗಳಿಂದ 250 ಕೋಟಿ ವ್ಯವಹಾರ ಮಾಡಿ ನಿರ್ವಹಣಾ ವೆಚ್ಚ, ಸವಕಳಿ ಮತ್ತು ಆಡಳಿತಾತ್ಮಕ ವೆಚ್ಚಗಳನ್ನು ಕಳೆದು 4.48 ಕೋಟಿ ರೂ. ನಿವ್ವಳ ಲಾಭ ದಾಖಲಿಸಿರುವುದಾಗಿ ಫೆಡರೇಶನಿನ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ ತಿಳಿಸಿದ್ದಾರೆ.
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಕಾರದಿಂದ ಫೆಡರೇಶನ್ ವತಿಯಿಂದ ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸಹಕಾರಿ ಸಂಸ್ಥೆಗಳಿಗೆ, ಮೀನುಗಾರ ಸಂಘಗಳಿಗೆ ಮತ್ತು ಮೀನುಗಾರರಿಗೆ ಆಧುನೀಕೃತ ಮೀನುಗಾರಿಕೆ ಮತ್ತು ಮೀನಿನ ಉತ್ಪನ್ನಗಳ ಬಗ್ಗೆ ತಾಂತ್ರಿಕ ಮಾಹಿತಿಯನ್ನು ನೀಡುವ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





