Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬೆಳಿಗ್ಗೆ ಬೇಗ ಏಳುವುದರ ಲಾಭಗಳು ನಿಮಗೆ...

ಬೆಳಿಗ್ಗೆ ಬೇಗ ಏಳುವುದರ ಲಾಭಗಳು ನಿಮಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ30 Aug 2019 10:37 PM IST
share
ಬೆಳಿಗ್ಗೆ ಬೇಗ ಏಳುವುದರ ಲಾಭಗಳು ನಿಮಗೆ ಗೊತ್ತೇ?

ರಾತ್ರಿ ಬೇಗ ಮಲಗಬೇಕು, ಬೆಳಿಗ್ಗೆ ಬೇಗ ಏಳಬೇಕು ಎಂಬ ಹಿಂದಿನಿಂದಲೂ ಪ್ರಚಲಿತವಿರುವ ನಮ್ಮ ಹಿರಿಯರ ಮಾತಿಗೆ ಕಾರಣವಿಲ್ಲದಿಲ್ಲ. ಪ್ರತಿ ದಿನವನ್ನೂ ಅದೇ ಉತ್ಸಾಹದಿಂದ ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಮರಳಿ ಪಡೆಯಲು ಬೆಳಿಗ್ಗೆ ಬೇಗ ಏಳುವುದು ಅಗತ್ಯವಾಗಿದೆ.

ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಬೇಗ ಮಲಗಿ ಬೇಗ ಏಳುವ ತತ್ವವನ್ನು ಆಧರಿಸಿ ತಮ್ಮ ದೈನಂದಿನ ಬದುಕನ್ನು ರೂಢಿಸಿಕೊಂಡಿದ್ದರು. ಹೆಚ್ಚಿನೆಲ್ಲ ಚಟುವಟಿಕೆಗಳನ್ನು ಹಗಲಿನಲ್ಲಿ ಮುಗಿಸಲಾಗುತ್ತಿತ್ತು ಮತ್ತು ರಾತ್ರಿ ಸಮಯ ವಿಶ್ರಾಂತಿಗೆ ಮೀಸಲಾಗಿರುತ್ತಿತ್ತು. ಹೀಗಾಗಿ ಶರೀರವು ಹಗಲು ಮತ್ತು ರಾತ್ರಿ ಚಟುವಟಿಕೆ ಮತ್ತು ವಿಶ್ರಾಂತಿಗಳ ಲಯಬದ್ಧತೆಯನ್ನು ಪಡೆದುಕೊಂಡಿತ್ತು. ಚಟುವಟಿಕೆ ಮತ್ತು ವಿಶ್ರಾಂತಿಗಳ ಈ ಚಕ್ರಕ್ಕೆ ಅನುಗುಣವಾಗಿ ನಮ್ಮ ಹಿರಿಯರು ಬೆಳಿಗ್ಗೆ ಬೇಗ ಏಳುತ್ತಿದ್ದರು. ಇಂದಿಗೂ ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಬೆಳಗಿನ ಜಾವ ಜನರು ಸೂರ್ಯನನ್ನು ಪ್ರಾರ್ಥಿಸುವ ಸಾಂಪ್ರದಾಯಿಕ ವಿಧಿಗಳನ್ನು ಕಾಣಬಹುದು.

ಬೆಳಿಗ್ಗೆ ಬೇಗ ಎದ್ದು ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳುವುದರಿಂದ ಸಂತೋಷದ ಹಾರ್ಮೋನ್ ಆಗಿರುವ ಸೆರೊಟೋನಿನ್ ನಮ್ಮ ಶರೀರದಲ್ಲಿ ಉತ್ಪಾದನೆಯಾಗುತ್ತದೆ ಮತ್ತು ಇದು ಮಿದುಳಿನ ಮೂರನೇ ಕುಹರದಲ್ಲಿರುವ ಪೀನಲ್ ಗ್ರಂಥಿಯು ಮೆಲಾಟೊನಿನ್ ಹಾರ್ಮೋನ್‌ನ್ನು ಸ್ರವಿಸುವಂತೆ ಮಾಡುತ್ತದೆ. ಈ ಹಾರ್ಮೋನ್ ಮರುದಿನ ಬೆಳಿಗ್ಗೆ ನಾವು ಬೇಗ ಎದ್ದು ತಾಜಾ ಆಗಿರಲು ರಾತ್ರಿ ಸುಖನಿದ್ರೆಗೆ ಅವಕಾಶವನ್ನು ಕಲ್ಪಿಸುತ್ತದೆ. ಈ ಚಕ್ರಕ್ಕೆ ವ್ಯತ್ಯಯವುಂಟಾದಾಗ ನಾವು ಆಧುನಿಕ ಜಗತ್ತಿನ ಎರಡು ಪಿಡುಗುಗಳಾದ ನಿದ್ರೆಯ ಸಮಸ್ಯೆಗಳು ಮತ್ತು ಖಿನ್ನತೆಗೆ ಗುರಿಯಾಗುವಂತಾಗುತ್ತದೆ. ಇದು ನಮಗೆ ನಿದ್ರೆಯ ಮಹತ್ವವನ್ನು ತಿಳಿಸುತ್ತದೆ.

ನಾವು ಎಷ್ಟು ಚೆನ್ನಾಗಿ ನಿದ್ರೆ ಮಾಡುತ್ತೇವೆ ಎನ್ನುವುದು ದಿನವಿಡೀ ನಮ್ಮ ಮನಃಸ್ಥಿತಿಯನ್ನು ನಿರ್ಧರಿಸುತ್ತದೆ. ನಾವು ಚೆನ್ನಾಗಿ ನಿದ್ರೆ ಮಾಡಿದಾಗ ಮಿದುಳಿನೊಂದಿಗೆ ನೇರ ಸಂಪರ್ಕ ಹೊಂದಿರುವ ಮೂಗಿನ ಬಲಹೊಳ್ಳೆಯು ಬೆಳಿಗ್ಗೆ ಸ್ವಯಂಚಾಲಿತವಾಗಿ ಕ್ರಿಯಾಶೀಲಗೊಳ್ಳುತ್ತದೆ. ಬೆಳಗ್ಗೆ ನಾವು ಪೂರ್ಣ ಜಾಗ್ರತರಾಗಿದ್ದಾಗ ಸಹಜವಾಗಿಯೇ ನಮ್ಮ ಪ್ರಜ್ಞೆಯು ಅತ್ಯುನ್ನತ ಸ್ಥಿತಿಯಲ್ಲಿರುತ್ತದೆ ಮತ್ತು ನಮ್ಮ ಒಟ್ಟಾರೆ ಆರೋಗ್ಯವು ತನ್ನಿಂತಾನೇ ಸುಧಾರಿಸುತ್ತದೆ.

ನಾವು ರಾತ್ರಿ ತುಂಬ ತಡವಾಗಿ ಮಲಗಿದರೆ ಏನಾಗುತ್ತದೆ? ನೈಸರ್ಗಿಕ ಲಯದ ವಿರುದ್ಧ ಹೋಗುವುದರಿಂದ ನಾವು ಪ್ರವಾಹದ ಎದುರು ಈಜುವ ಸಾಹಸ ಮಾಡುತ್ತೇವೆ ಮತ್ತು ಇದು ಕ್ರಮೇಣ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಅನಿಯಂತ್ರಿತ ಅಭ್ಯಾಸಗಳು ಮತ್ತು ತಡರಾತ್ರಿ ಹಾಸಿಗೆಯಲ್ಲಿ ಬಿದ್ದುಕೊಳ್ಳುವುದು ನಮ್ಮ ನಿದ್ರೆಯ ಸ್ವರೂಪದಲ್ಲಿ ವ್ಯತ್ಯಯಗಳಿಗೆ ಕಾರಣವಾಗುತ್ತವೆ ಹಾಗೂ ನಮ್ಮ ನರಮಂಡಲವು ಒತ್ತಡದಲ್ಲಿರು ವುದರಿಂದ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಮಟ್ಟವು ಕುಸಿಯುತ್ತದೆ. ರಾತ್ರಿ ನಿದ್ರೆಯಿಂದ ವಂಚಿತರಾದಾಗ ಮರುದಿನ ಉಲ್ಲಾಸವನ್ನು ಕಳೆದುಕೊಳ್ಳುತ್ತೇವೆ ಮತ್ತು ಸಣ್ಣಪುಟ್ಟ ವಿಷಯಗಳೂ ಕಿರಿಕಿರಿಯನ್ನುಂಟು ಮಾಡುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X