Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಧ್ಯಮಗಳು ಸಾರ್ವಜನಿಕವಾಗಿ...

ಮಾಧ್ಯಮಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಹಾರಿಸ್ ಕೌಸರಿ ಕೋಲ್ಪೆ

ಮಾಧ್ಯಮ ಭಯೋತ್ಪಾದನೆಯ ವಿರುದ್ಧ ಎಸ್ಕೆಎಸ್ಸೆಸ್ಸೆಫ್ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 Aug 2019 10:51 PM IST
share
ಮಾಧ್ಯಮಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಹಾರಿಸ್ ಕೌಸರಿ ಕೋಲ್ಪೆ

ಬಂಟ್ವಾಳ : ಅಮಾಯಕರನ್ನು ಭಯೋತ್ಪಾದಕರನ್ನಾಗಿಸುವ ಕೆಲವು ಮಾಧ್ಯಮ ಭಯೋತ್ಪಾದನೆಯ ವಿರುದ್ಧ ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಸಮಿತಿ ವತಿಯಿಂದ ಶುಕ್ರವಾರ ಸಂಜೆ ಬಿ.ಸಿ.ರೋಡ್‍ನ ಕೈಕಂಬ ಜಂಕ್ಷನ್‍ನಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಅಧ್ಯಕ್ಷ ಇರ್ಷಾದ್ ದಾರಿಮಿ ಅವರು ದುವಾ: ನೆರವೇರಿಸಿದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ, ಮಿತ್ತಬೈಲ್ ಮಸೀದಿಯ ಖತೀಬ್ ಅಶ್ರಫ್ ಫೈಝಿ ಉದ್ಘಾಟನಾ ಭಾಷಣ ಮಾಡಿದರು.

ಎಸ್ಕೆಎಸ್ಸೆಸ್ಸೆಫ್ ಉಪ್ಪಿನಂಗಡಿ ವಲಯದ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ ಕೋಲ್ಪೆ ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿ, ದೇಶಾದ್ಯಂತ ಸಮಾನತೆ, ಐಕ್ಯತೆಗಾಗಿ ಜನರು ಪಣತೊಡುತ್ತಿರುವಾಗ ಕೋಮುಶಕ್ತಿಗಳು ಪ್ರಜಾಪ್ರಭುತ್ವ ಬುಡಮೇಲು ಹುನ್ನಾರಕ್ಕೆ ಕೈಹಾಕುತ್ತಿವೆ. ಇದು ಅಪಾಯಕಾರಿ. ಭಯೋತ್ಪಾದನೆಯ ಹೆಸರಿನಲ್ಲಿ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಧರ್ಮ, ಧರ್ಮಗಳ ನಡುವೆ ಕಂದಕವನ್ನು ಸೃಷ್ಠಿಸಲಾಗುತ್ತಿರುವುದು ಖಂಡನೀಯ. ಇದರ ವಿರುದ್ಧ ಎಸ್ಕೆಎಸ್ಸೆಸ್ಸೆಫ್ ಹೋರಾಟ ನಿರಂತರವಾಗಲಿದೆ ಎಂದು ಹೇಳಿದರು.

ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ರಾಜ್ಯಾಧ್ಯಕ್ಷ ಇಬ್ರಾಹಿಂ ಬಾತಿಶಾ ಮಾತನಾಡಿ, ಬೆಳ್ತಂಗಡಿ ತಾಲೂಕಿನ ಗೋವಿಂದೂರು ನಿವಾಸಿ, ಧರ್ಮಗುರು ಅಬ್ದುಲ್ ರವೂಫ್ ಅವರನ್ನು ಕೆಲವೊಂದು ಕನ್ನಡ ಸುದ್ದಿವಾಹಿನಿಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಅವರನ್ನು ಸಮಾಜದ ಮುಂದೆ ಭಯೋತ್ಪಕರೆಂದು ಬಿಂಬಿಸುವ ಪ್ರಯುತ್ನ ಮಾಡಿದೆ. ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಪೂರ್ವಗ್ರಹ ಪೀಡಿತ ವರದಿಗಳು ಬಿತ್ತರಿಸಿ ಸಮುದಾಯದ ಜನರಲ್ಲಿ ಅಭದ್ರತಾ ಮನೋಭಾವವನ್ನು ಸೃಸ್ಟಿಸುತ್ತಿದೆ. ಈ ಸಮಾಜಕ್ಕೆ ಸತ್ಯಾಸತ್ಯತೆಯ ಸಂದೇಶವನ್ನು ರವಾನಿಸಬೇಕಿದ್ದ ಮಾಧ್ಯಮಗಳು ಇಂದು ಸಾಮಾಜಿಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಮಾತ್ರವಲ್ಲ ಅಮಾಯಕರನ್ನು ಭಯೋತ್ಪಾದಕರಾಗಿ ಚಿತ್ರೀಕರಿಸುತ್ತಿರುವುದು ಖೇದಕರ ಎಂದರು.

ಸುಳ್ಳು ಸುದ್ದಿ ಪ್ರಕಟಿಸಿದ ಸುದ್ದಿ ವಾಹಿನಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸದೇ ಇದೀಗ ಯೂಟ್ಯೂಬ್‍ನಲ್ಲಿದ್ದ ವೀಡಿಯೋ ಡಿಲಿಟ್ ಮಾಡಿದೆ. ಎಸ್ಕೆಎಸ್ಸೆಸ್ಸೆಫ್ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆಯ ಮೂಲಕ ಹೋರಾಟ ಹಮ್ಮಿಕೊಂಡಿದ್ದು, ಮಾಧ್ಯಮಗಳು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದ ಅವರು, ಜಿಲ್ಲೆಯ ಸೌಹಾರ್ದವನ್ನು ಕೆಡಿಸುತ್ತಿರುವ ಇಂತಹ ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದರು.

ಪ್ರತಿಭಟನೆಯ ಬಳಿಕ ಬಂಟ್ವಾಳ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಕೆಎಸ್ಸೆಸ್ಸೆಫ್ ವಿಖಾಯ ಕೇಂದ್ರ ಸಮಿತಿ ಸದಸ್ಯ ಬಶೀರ್ ಮಜಲ್, ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್, ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಸಮಿತಿ ಉಪಾಧ್ಯಕ್ಷ ಅಲ್ತಾಫ್ ಮಿತ್ತಬೈಲ್, ಪ್ರಮುಖರಾದ ಹಾರೂನ್ ರಶೀದ್, ಬಂಟ್ವಾಳ ಮಸೀದಿ ಮುದರ್ರಿಸ್ ಉಸ್ಮಾನ್ ಪೈಝಿ, ಶೇಖ್ ಮುಹಮ್ಮದ್ ಇರ್ಫಾನಿ, ವಲಯ ಸಮಿತಿ ಸದಸ್ಯ ಸತ್ತಾರ್ ಕೌಸರಿ, ಶಾಕೀರ್ ಶಾಂತಿಯಂಗಡಿ, ಪ್ರಧಾನ ಕಾರ್ಯದರ್ಶಿ ಟಿ.ಎಂ ಹನೀಫ್ ತಾಳಿಪಡ್ಪು, ಮುಹಮ್ಮದ್ ಶರೀಫ್, ಸಲಾಂ, ಸಮದ್ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ಸಿರಾಜುದ್ದೀನ್ ಫೈಝಿ ವಂದಿಸಿ, ಮುಹಮ್ಮದ್ ಖಲಂದರ್ ತುಂಬೆ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X