Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೃಷ್ಟಿಕರ್ತನನ್ನು ಅರಿಯಲು ವಿಜ್ಞಾನ...

ಸೃಷ್ಟಿಕರ್ತನನ್ನು ಅರಿಯಲು ವಿಜ್ಞಾನ ಸಹಕಾರಿಯಾಗುತ್ತೆ: ಅಬ್ದುಲ್ ಕಾದಿರ್ ಬಾಷಾ

ಶಿಕ್ಷಕರಿಗಾಗಿ ವಿಜ್ಞಾನಮೇಳ ಮಾಹಿತಿ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ31 Aug 2019 6:29 PM IST
share
ಸೃಷ್ಟಿಕರ್ತನನ್ನು ಅರಿಯಲು ವಿಜ್ಞಾನ ಸಹಕಾರಿಯಾಗುತ್ತೆ: ಅಬ್ದುಲ್ ಕಾದಿರ್ ಬಾಷಾ

ಭಟ್ಕಳ: ವಿಜ್ಞಾನವು ಮನುಷ್ಯನನ್ನು ತನ್ನ ಸೃಷ್ಟಿಕರ್ತನನ್ನು ಅರಿಯುವಂತೆ ಮಾಡುತ್ತದೆ ಎಂದು ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಮಾಜಿ ಅಧ್ಯಕ್ಷ ಭಟ್ಕಳ ಮುಸ್ಲಿಮ್ ಜಮಾಅತ್ ದುಬೈ ಇದರ ಮುಖಂಡ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್ ಹೇಳಿದರು.

ಅವರು ಶನಿವಾರ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ಸಭಾಂಗಣದಲ್ಲಿ ಎ.ಜೆ.ಅಕಾಡೆಮಿ ಸಂಶೋಧನಾ ಮತ್ತು ಅಭಿವೃದ್ದಿ ಸಂಸ್ಥೆ ಹಾಗೂ ತರಬಿಯತ್ ಎಜ್ಯುಕೇಶನ್ ಸೂಸೈಟಿ ಜಂಟಿಯಾಗಿ ಆಯೋಜಿಸಿದ್ದ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳ ಗಣಿತ,ವಿಜ್ಞಾನ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನ ಓರಿಯಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

14 ನೂರು ವರ್ಷಗಳ ಹಿಂದೆಯೆ ಪ್ರವಾದಿ ಮುಹಮ್ಮದ್ (ಸ)  ಕುರ್ ಆನ್ ಬೋಧಿಸುವುದರ ಮೂಲಕ ಮನುಷ್ಯ ಹಾಗೂ ವಿಜ್ಞಾನದೊಂದಿಗಿನ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ಕುರ್ ಆನ್ ಅಧ್ಯಯನದ ಮೂಲಕ ವಿಜ್ಞಾನದ ಹೊಸ ಹೊಸ ಅವಿಷ್ಕಾರಗಳು ಅನಾವರಣಗೊಳ್ಳುತ್ತವೆ ಎಂದರು.

ಉದ್ಘಾಟನಾ ಭಾಷಣಗೈದ ನ್ಯೂ ಶಮ್ಸ್ ಸ್ಕೂಲ್ ಪ್ರಾಂಶುಪಾಲೆ ಫಹಮಿದಾ ಖಿಝರ್, ಸಂಶೋಧನಾ ಕ್ಷೇತ್ರದಲ್ಲಿ ಪ್ರಾಚೀನ ಭಾರತ ಬಹಳ ಮುಂದುವರೆದಿತ್ತು. ಆದರೆ ಆಧುನಿಕ ಭಾರತದಲ್ಲಿ ಸಂಶೋಧನೆಗಳು ತೀರ ವಿರಳವಾಗಿದ್ದು ಕೆಳ ಸ್ತರದಿಂದಲೇ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಮನೋಭಾವನೆಗಳನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದ ಅವರು ಇಂದು ಇಂಜಿನೀಯರ್‍ಗಳು ಸಂಶೋಧನೆ, ಉತ್ಪಾದನೆಗಳಂತಹ ಕೆಲಸಗಳನ್ನು ಮಾಡುವುದನ್ನು ಬಿಟ್ಟು ಕಾಲ್ ಸೆಂಟರ್ ಉದ್ಯೋಗಿ, ಟೆಲಿಫೋನ್ ಆಪರೇಟರ್  ಕೆಲಸಕ್ಕಾಗಿ ಮಾತ್ರ ಸೀಮಿತವಾಗಿಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಆ ಮಟ್ಟಕ್ಕೆ ಸಿದ್ದಗೊಳಿಸುವ ಕಾರ್ಯವಾಗಬೇಕು ಈ ನಿಟ್ಟಿನಲ್ಲಿ ವಿಜ್ಞಾನಮೇಳಗಳನ್ನು ಯಶಸ್ವಿಗೊಳಿಸಬೇಕೆಂದು ಅವರು ಕರೆ ನೀಡಿದರು. ಮೇಕ್ ಇಂಡಿಯಾ ಯೋಜನೆ ಅರ್ಥಗರ್ಭಿತವಾಗಿದ್ದು ಅದನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆಯೇ ಹೊರತು ಅದನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು.

ಎ.ಜೆ.ಅಕಾಡೆಮಿಯ ನಿರ್ದೇಶಕ ಮುಹಮ್ಮದ್ ಅಬ್ದುಲ್ಲಾ ಜಾವಿದ್ ವಿಜ್ಞಾನಮೇಳ ಹಾಗೂ ವಿಜ್ಞಾನ ವಸ್ತು ಪ್ರದರ್ಶನಗಳ ನಡುವಿನ ವ್ಯತ್ಯಾಸವನ್ನು ತಿಳಿಸುತ್ತ ವಿದ್ಯಾರ್ಥಿಗಳನ್ನು ವಿಜ್ಞಾನಮೇಳಕ್ಕೆ ಯಾವ ರೀತಿ ಸಿದ್ಧಗೊಳಿಸಬೇಕೆಂದು ಪ್ರೋಜೆಕ್ಟರ್ ಮೂಲಕ ವಿವರಿಸಿದರು. 

ಭಟ್ಕಳ ಅಂತರಶಾಲಾ ವಿಜ್ಞಾನ ಮೇಳದ ಸಂಯೋಕ ಎಂ.ಆರ್.ಮಾನ್ವಿ ಅತಿಥಿಗಳನ್ನು ಸ್ವಾಗತಿಸಿ, ಡಿ.15 ರಂದು ಆಯೋಜಿಸಲ್ಪಡುವ ವಿಜ್ಞಾನಮೇಳಕ್ಕೆ ಶಿಕ್ಷಕರನ್ನು ಸನ್ನದ್ಧುಗೊಳಿಸುವಲ್ಲಿ ಈ ಕಾರ್ಯಕ್ರಮ ದಿಕ್ಸೂಚಿಯಾಗಲಿದೆ ಎಂದರು.

ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ಭಟ್ಕಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜನಾಧಿಕಾರಿ ಯಲ್ಲಮ್ಮ ಮರಿಸ್ವಾಮಿ, ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಧ್ಯಕ್ಷ ಮುಖ್ತಾರ್ ಆಹಮದ್ ಕೊತ್ವಾಲ್, ನ್ಯಾಶನಲ್ ಕಾಲೋನಿ ಮುರುಢೇಶ್ವರದ ಸಿಆರ್ಪಿ ಸಯೀದಾ ಫಾತಿಮನ್ನಿಸಾ, ಭಟ್ಕಳ ಸಿಆರ್ಪಿ ಅಲಿ ಮನೆಗಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಅಬ್ದುಲ್ಲಾ ರಬೀ ಖಲಿಫಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು. 

ಈ ಸಂದರ್ಭಲ್ಲಿ ಎ.ಜೆ.ಅಕಾಡಮಿಯಿಂದ ಸಿದ್ಧಗೊಳಿಸಿದ ‘ಶಿಕ್ಷಕರಿಗಾಗಿ ವಿಜ್ಞಾನಮೇಳ ಮಾರ್ಗದರ್ಶಿ’ ಪುಸ್ತಕವನ್ನು ಸಂಸ್ಥೆಯ ಹಿರಿಯ ಸದಸ್ಯ ಸೈಯ್ಯದ್ ಶಕೀಲ್ ಆಹ್ಮದ್ ಎಸ್.ಎಂ ಬಿಡುಗೊಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಗಳ ಸುಮಾರು 75 ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X