ದರೋಡೆಗೆ ಸಂಚು: ರೌಡಿ, ಸಹಚರರ ಬಂಧನ

ಬೆಂಗಳೂರು, ಸೆ.1: ದರೋಡೆಗೆ ಸಂಚು ರೂಪಿಸಿದ ಆರೋಪದಡಿ ರೌಡಿಶೀಟರ್, ಆತನ ಸಹಚರರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿ ಯಾಗಿದ್ದಾರೆ.
ರೌಡಿಶೀಟರ್ ಜಗದೀಶ್, ಈತನ ಸಹಚರರಾದ ಸತ್ಯರಾಜ್, ರವಿಕಿರಣ್, ನಿಖಿಲ್ ಎಂಬುವರು ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಹನುಮಕ್ಕ ಹನುಮಂತಪ್ಪ ಲೇಔಟ್‌ನ 2ನೆ ಕ್ರಾಸ್‌ನ ರಸ್ತೆಯಲ್ಲಿ ಸಾರ್ವಜನಿಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಅವರಿಂದ ನಗದು-ಚಿನ್ನದ ಆಭರಣಗಳನ್ನು ದೋಚಲು ಆರೋಪಿಗಳು ಸಂಚು ರೂಪಿಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರ ಪೈಕಿ ಜಗದೀಶ್ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಯತ್ನ ಆರೋಪಗಳಿವೆ. ಸತ್ಯರಾಜ್ ಸಹ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಇದೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದ್ದು, ಇವರ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story





