ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮಾಲಕ ಸಾವು
ಶಿವಮೊಗ್ಗ, ಸೆ. 1: ಜಿಲ್ಲೆಯ ಆಗುಂಬೆಯ ಹೆಗ್ಗೋಡು ಗ್ರಾಮದ ಹಾರ್ಡ್‍ವೇರ್ ಅಂಗಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ವೇಳೆ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಗಡಿಯ ಮಾಲಕ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಬಾಲಕೃಷ್ಣ (53) ಮೃತಪಟ್ಟ ಅಂಗಡಿ ಮಾಲಕ ಎಂದು ಗುರುತಿಸಲಾಗಿದೆ. ಇವರ ಒಡೆತನದ ದುರ್ಗಾಪರಮೇಶ್ವರಿ ಹಾರ್ಡ್‍ವೇರ್ ಅಂಗಡಿಯಲ್ಲಿ ಆಗಸ್ಟ್ 27 ರಂದು ಶಾರ್ಟ್ ಸರ್ಕ್ಯೂಟ್ ಉಂಟಾಗಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿತ್ತು. ತೀವ್ರ ಸ್ವರೂಪದ ಸುಟ್ಟ ಗಾಯಕ್ಕೆ ತುತ್ತಾದ ಬಾಲಕೃಷ್ಣರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





