ಮೂಡುಬಿದಿರೆ : ಸರಣಿ ಅಪಘಾತಕ್ಕೆ ಓರ್ವ ಬಲಿ

ಮೂಡುಬಿದಿರೆ : ಇಲ್ಲಿನ ಹಂಡೇಲು ಬಳಿಯ ತಿರುವಿನಲ್ಲಿ ಸರಣಿ ಅಪಘಾತ ನಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ತೋಡಾರು ನಿವಾಸಿ ಡೊಂಬಯ ಹರಿಜನ ಅವರ ಪುತ್ರ ಶೇಖರ್ (30) ಮೃತರು ಎಂದು ಗುರುತಿಸಲಾಗಿದೆ.
ಶೇಖರ್ ಓಮ್ನಿ ಕಾರಿನಲ್ಲಿ ತೋಡಾರಿನಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದಾಗ ಹಂಡೇಲು ಬಳಿಯ ತಿರುವಿನಲ್ಲಿ ಎದುರಿನಲ್ಲಿ ಬರುತ್ತಿದ್ದ ಆಟೋಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಓಮ್ನಿ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಡ್ಝ್ ಕಾರಿಗೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಓಮ್ನಿಯಲ್ಲಿದ್ದ ಶೇಖರ್ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಿಡ್ಝ್ ಕಾರಿನ ಚಾಲಕ ಮತ್ತು ಕಾರಿನಲ್ಲಿದ್ದವರಿಗೆ ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ.
ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





