ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಭೇಟಿಯಾದ ಕುಟುಂಬದ ಸದಸ್ಯರು

ಶ್ರೀನಗರ, ಸೆ. 1: ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಅವರ ಕುಟುಂಬದ ಸದಸ್ಯರು ಭೇಟಿಯಾಗಲು ರವಿವಾರ ಅವಕಾಶ ನೀಡಲಾಯಿತು. ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಬಳಿಕ ಇಬ್ಬರು ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಹರಿ ನಿವಾಸ್ ಅತಿಥಿ ಗೃಹದಲ್ಲಿರುವ ಒಮರ್ ಅಬ್ದುಲ್ಲಾ ಅವರನ್ನು ಅವರ ಸಹೋದರಿ ಹಾಗೂ ಮಕ್ಕಳು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ. ಪಿಡಿಪಿ ವರಿಷ್ಠೆ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಲು ಅವರ ಕುಟುಂಬಕ್ಕೆ ಅವಕಾಶ ನೀಡಲಾಯಿತು. ಅವರ ತಾಯಿ ಹಾಗೂ ಸಹೋದರಿ ಭೇಟಿ ಮಾಡಿದರು ಎಂದು ಮೂಲಗಳು ತಿಳಿಸಿವೆ. ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಕಾಶ್ಮೀರದ ವಿವಿಧ ಭಾಗಗಳಲ್ಲಿ ನಿರ್ಬಂಧ ಸಡಿಲಗೊಳಿಸಲಾಗಿದೆ ಎಂದು ಅವು ತಿಳಿಸಿವೆ.
Next Story





