Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಹಾನಿ ಕೊಡಗಿನಲ್ಲಿ ಸರಳ ಗಣೇಶೋತ್ಸವ...

ಮಳೆಹಾನಿ ಕೊಡಗಿನಲ್ಲಿ ಸರಳ ಗಣೇಶೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Sept 2019 11:32 PM IST
share
ಮಳೆಹಾನಿ ಕೊಡಗಿನಲ್ಲಿ ಸರಳ ಗಣೇಶೋತ್ಸವ ಆಚರಣೆ

ಮಡಿಕೇರಿ,ಸೆ.1 :ಪ್ರಸ್ತುತ ವರ್ಷ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆಯ ಪ್ರವಾಹದ ಸಂಕಷ್ಟವನ್ನು ಎದುರಿಸುತ್ತಿರುವ ಕೊಡಗು ಜಿಲ್ಲೆಯಲ್ಲಿ ಸಾಂಪ್ರದಾಯಿಕ ಗಣೇಶೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದೆ.

ಜಿಲ್ಲೆಯಾದ್ಯಂತ ವಿವಿಧ ಗಣೇಶೋತ್ಸವ ಸಮಿತಿಗಳು 400 ಕ್ಕೂ ಹೆಚ್ಚು ಭಾಗಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಮಡಿಕೇರಿಯ ಕೋಟೆ ಶ್ರೀಮಹಾಗಣಪತಿ ದೇವಾಲಯದಲ್ಲಿ ಸೋಮವಾರ ಬೆಳಗ್ಗಿನಿಂದಲೇ ಅಭಿಷೇಕ, ಅಲಂಕಾರ, ಅರ್ಚನೆ, ಹೋಮ ಹವನಾದಿ ವಿಶೇಷ ಪೂಜೆಗಳು ನಡೆಯಲಿವೆ. ಭಕ್ತರು ಸಾವಿರಾರು ಈಡುಗಾಯಿ ಸೇವೆಯನ್ನು ಮಹಾಗಣಪತಿಗೆ ಅರ್ಪಿಸಲಿದ್ದಾರೆ.

ಉಳಿದಂತೆ ನಗರದ ಹೊಸ ಬಡಾವಣೆಯ ಪ್ರಸನ್ನ ಗಣಪತಿ ದೇವಾಲಯ, ದೇಚೂರು ಶ್ರೀವಿದ್ಯಾಗಣಪತಿ, ಕನ್ನಂಡಬಾಣೆಯ ದೃಷ್ಟಿ ಗಣಪತಿ, ಕಾಲೇಜು ರಸ್ತೆಯ ವಿಜಯವಿನಾಯಕ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಗಣೇಶನ ಆರಾಧನೆ ನಡೆಯಲಿದೆ.

ನಗರದಲ್ಲಿ 25 ಕ್ಕೂ ಹೆಚ್ಚಿನ ಗಣೇಶೋತ್ಸವ ಸಮಿತಿಗಳು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಪ್ರತಿಷ್ಠಾಪನೆ ಮತ್ತು ವಿಸರ್ಜನೆಯ ಸಂದರ್ಭ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಈಗಾಗಲೇ ನಗರ ಠಾಣಾ ಪೊಲೀಸರು ಸೂಕ್ತ ಸಲಹೆ, ಸೂಚನೆ ನೀಡಿದ್ದಾರೆ.

ಗಣೇಶೋತ್ಸವವನ್ನು ಪ್ರತಿವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದ ವಿರಾಜಪೇಟೆಯಲ್ಲಿ ಈ ಬಾರಿ ಮಹಾಮಳೆಯಿಂದ ಸಾವು, ನೋವುಗಳು ಸಂಭವಿಸಿರುವುದರಿಂದ ಸರಳ ಆಚರಣೆಗೆ ಸಮಿತಿಗಳು ಸಿದ್ಧತೆ ಮಾಡಿಕೊಂಡಿವೆ.  ಸೋಮವಾರಪೇಟೆಯಲ್ಲಿ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸುವುದರೊಂದಿಗೆ ಗಣೇಶೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಲಾಗುತ್ತಿದೆ.

ಕುಶಾಲನಗರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಗಣಪತಿ ದೇವಾಲಯದಲ್ಲೂ ಗೌರಿ, ಗಣೇಶೋತ್ಸವ ವಿಶೇಷ ಪೂಜೆಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಈ ಬಾರಿ ಪರಿಸರ ಸ್ನೇಹಿ ಗಣಪನ ಮೂರ್ತಿಗಳಿಗೆ ಆದ್ಯತೆ ನೀಡಿರುವುದು ವಿಶೇಷ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X