ಈಡಿ ವಿಚಾರಣೆ: ಕಣ್ಣೀರು ಹಾಕಿದ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ, ಸೆ. 2: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ.
ಮೂರನೇ ದಿನವಾದ ಇಂದು ಸಹ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವ ಮುನ್ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕಣ್ಣೀರು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಣ್ಣಲ್ಲಿ ನೀರು ಬರುತ್ತಿದ್ದು, ನಮ್ಮ ತಂದೆಗೆ ಪೂಜೆ ಮಾಡುವ ಅವಕಾಶವನ್ನೂ ನನ್ನ ಬಿಜೆಪಿ ಸ್ನೇಹಿತರು ಅಧಿಕಾರದ ಮುಖಾಂತರ ಕೊಟ್ಟಿಲ್ಲ ಎಂದರು.
ನನಗೆ ದುಃಖ ಆಗುತ್ತಿದೆ. ಏಕೆಂದರೆ, ಇವತ್ತು ತಂದೆ ಹಾಗೂ ಹಿರಿಯರಿಗೆ ನಾನು, ನನ್ನ ಸಹೋದರ ಡಿ.ಕೆ. ಸುರೇಶ್ ಪೂಜೆ ಸಲ್ಲಿಸಬೇಕಿತ್ತು. ಅಷ್ಟೇ ಅಲ್ಲದೆ, ಅವರಿಗೆ ಎಡೆ ಇಡಲು ಸಹ ಅವಕಾಶ ಕೊಟ್ಟಿಲ್ಲ ಎಂದು ಡಿ.ಕೆ.ಶಿವಕುಮಾರ್ ಭಾವುಕರಾದರು.
Next Story





