ಭಾರತದ ವಿರುದ್ಧ ಪಾಕ್ ಮೊದಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಿಲ್ಲ: ಇಮ್ರಾನ್ ಖಾನ್

ಇಸ್ಲಾಮಾಬಾದ್ ,ಸೆ.2: ಪಾಕಿಸ್ತಾನವು ಮೊದಲು ಭಾರತದ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ
ಇಸ್ಲಾಮಾಬಾದ್ ನಲ್ಲಿ ಸಿಖ್ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು “ಪಾಕಿಸ್ತಾನ ಮತ್ತು ಭಾರತ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳು. ಆದರೆ ನಾವು ಮೊದಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಕಾರ್ಯಕ್ಕೆ ಕೈ ಹಾಕುವುದಿಲ್ಲ ”ಎಂದು ಇಮ್ರಾನ್ ಖಾನ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ 370ನೇ ವಿಧಿಯನ್ನು ಭಾರತ ರದ್ದುಪಡಿಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಇನ್ನಷ್ಟು ಜಾಸ್ತಿಯಾಗಿದೆ.
Next Story





