ಮುಂಬೈ ಒಎನ್ ಜಿಸಿ ಅನಿಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ದುರಂತ ; 4 ಸಾವು

ಮುಂಬೈ, ಸೆ.3: ನವೀ ಮುಂಬೈಯ ಉರಾನ್‌ನಲ್ಲಿ ಮಂಗಳವಾರ ಬೆಳಗ್ಗೆ ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೊರೇಶನ್ ಲಿಮಿಟೆಡ್ (ಒಎನ್‌ಜಿಸಿ) ಒಡೆತನದ ಅನಿಲ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ದುರಂತದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ.
ಬೆಂಕಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ
ಬೆಳಗ್ಗೆ 6:45 ರ ಸುಮಾರಿಗೆ ಕೆಲವು ಉದ್ಯೋಗಿಗಳು ಅದರೊಳಗೆ ಕೆಲಸ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ, ಬೆಂಕಿಯು ಘಟಕದ ಒಂದು ದೊಡ್ಡ ಭಾಗವನ್ನು ಆವರಿಸಿತು. "ಒಳಗೆ ಕೆಲಸ ಮಾಡುತ್ತಿದ್ದ ಮೂವರು ಉದ್ಯೋಗಿಗಳು ಅಪಘಾತದಲ್ಲಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ ಮತ್ತು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story