ಬುದ್ಧಿಮಾಂದ್ಯ ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

ಕೊಪ್ಪ, ಸೆ.3: ತಾಲೂಕಿನ ಹರಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಂಪು ನಗರದ ನಿವಾಸಿ ಗಿರೀಶ್ (27) ಎಂಬಾತ 11 ವರ್ಷದ ಬುದ್ದಿಮಾಂದ್ಯ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಕುವೆಂಪು ನಗರದ ನಿವಾಸಿ ಗಿರೀಶ್ ತನ್ನ ಮನೆ ಪಕ್ಕದಲ್ಲಿ ವಾಸವಿರುವ ಬುದ್ಧಿಮಾಂದ್ಯ ಬಾಲಕಿಗೆ ತಿಂಡಿ ಕೊಡುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಬಾಲಕಿ ಪೋಷಕರು ಇದನ್ನು ಗಮನಿಸಿ ಆರೋಪಿಯಿಂದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದು ಬಂದಿದೆ.
ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪದ ಕೊಪ್ಪ ಪೊಲೀಸರು ಫೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.
Next Story





