ದ್ರಾವಿಡ ಬ್ರಾಹ್ಮಣ ಎಜುಕೇಶನ್ ಸೊಸೈಟಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿವೇತನ
ಉಡುಪಿ, ಸೆ.3: ಉಡುಪಿ ಸೌತ್‌ಕೆನರಾ ಕಾಸರಗೋಡು ದ್ರಾವಿಡ ಬ್ರಾಹ್ಮಣ ಎಜುಕೇಶನ್ ಸೊಸೈಟಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಸಾಲರೂಪ ಮತ್ತು ಉಚಿತ ವಿದ್ಯಾರ್ಥಿವೇತನ ಸೌಲಭ್ಯ ದೊರೆಯುತ್ತದೆ.
ಆಸಕ್ತ ವಿದ್ಯಾರ್ಥಿಗಳು ಉಡುಪಿ ಅದಮಾರು ಮಠ ಅತಿಥಿ ಗೃಹದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ನಿಗದಿತ ನಮೂನೆಯ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿಯು ಸಂಸ್ಥೆಯ ವೆಬ್‌ಸೈಟ್ -www.uskdbes.adamarumatha.org -ಇಲ್ಲಿಯೂ ದೊರಕುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ.30 ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Next Story





