ಬಿಜೆಪಿ ಸರಕಾರ ಉಳಿಸಲು ಕಾಂಗ್ರೆಸ್ ನಾಯಕರ ಮೇಲೆ ದಾಳಿ: ಪ್ರಿಯಾಂಕ್ ಖರ್ಗೆ

ಕಲಬುರಗಿ, ಸೆ.3: ರಾಜ್ಯದಲ್ಲಿರುವ ಬಿಜೆಪಿ ಸರಕಾರ ಅಸ್ಥಿರದ ಘಟ್ಟ ತಲುಪಿದ್ದು, ಇದನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರಕಾರ ಅಸ್ಥಿರಗೊಳ್ಳುತ್ತಿದೆ. ಹೀಗಾಗಿ ವಿರೋಧ ಪಕ್ಷಗಳನ್ನು ನಿಯಂತ್ರಣದಲ್ಲಿಡಬೇಕೆಂಬ ಕಾರಣಕ್ಕಾಗಿ ಸಂವಿಧಾನಿಕ ತನಿಖಾ ಸಂಸ್ಥೆಗಳನ್ನು ಅಕ್ರಮವಾಗಿ ಬಳಸಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಅಲ್ಲದೆ, ಕೊಲೆ ಆರೋಪಿ ಪರ ಹೇಳಿಕೆ ಆಧಾರದ ಮೇಲೆ ಚಾರ್ಜ್‌ಶೀಟ್ ಇಲ್ಲದೆಯೇ ರಾತ್ರೋರಾತ್ರಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿದರು. ಈ ರಾಜಕೀಯ ಹುನ್ನಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
Next Story





