Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕಾವೇರಿ ಕೂಗು' ಅಭಿಯಾನಕ್ಕೆ ಚಾಲನೆ:...

'ಕಾವೇರಿ ಕೂಗು' ಅಭಿಯಾನಕ್ಕೆ ಚಾಲನೆ: ಬೈಕ್ ಜಾಥಾಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ, ದಿಗಂತ್

ವಾರ್ತಾಭಾರತಿವಾರ್ತಾಭಾರತಿ3 Sept 2019 11:27 PM IST
share
ಕಾವೇರಿ ಕೂಗು ಅಭಿಯಾನಕ್ಕೆ ಚಾಲನೆ: ಬೈಕ್ ಜಾಥಾಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ, ದಿಗಂತ್

ಮಡಿಕೇರಿ, ಸೆ.3: ಜಲಮೂಲಗಳ ಸಂರಕ್ಷಣೆಯೊಂದಿಗೆ ಉತ್ತಮ ಪರಿಸರ ನಿರ್ಮಾಣ ಮಾಡುವುದರಿಂದ ಪ್ರಾಕೃತಿಕ ಅನಾಹುತಗಳನ್ನು ತಪ್ಪಿಸಬಹುದು ಎಂದು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಕೃಷಿಗೆ ಸ್ಫೂರ್ತಿ ನೀಡುವ 'ಕಾವೇರಿ ಕೂಗು' ಅಭಿಯಾನಕ್ಕೆ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಸದ್ಗುರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಳೆ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಮತ್ತು ಅಂತರ್ಜಲವನ್ನು ಸಂರಕ್ಷಿಸಿಕೊಳ್ಳುವ ಶಕ್ತಿಯ ಕೊರತೆ ಭೂಮಿಯಲ್ಲಿ ಕಂಡು ಬರುತ್ತಿದೆ. ಇದೇ ಕಾರಣಕ್ಕೆ ಪ್ರವಾಹ ಅಥವಾ ಬರಗಾಲ ಸೃಷ್ಟಿಯಾಗಿ ಮಾನವ ಕುಲ ಕಷ್ಟ, ನಷ್ಟಗಳನ್ನು ಅನುಭವಿಸುತ್ತಿದೆ. ಗಿಡ ಮರಗಳನ್ನು ನೆಡುವ ಮೂಲಕ ಇಂತಹ ಅನಾಹುತಗಳನ್ನು ಶಾಶ್ವತವಾಗಿ ತಪ್ಪಿಸಬಹುದಾಗಿದೆ ಎಂದು ಸದ್ಗುರು ಅಭಿಪ್ರಾಯಪಟ್ಟರು. ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬಂದ ಪ್ರಾಕೃತಿಕ ವಿಕೋಪ ಮಾನವ ನಿರ್ಮಿತವಾಗಿದ್ದು, ಈ ಹಿನ್ನಲೆಯಲ್ಲಿ ಎಲ್ಲರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಎಂದರು. 

'ಕಾವೇರಿ ಕೂಗು' ಅಭಿಯಾನ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್ ವರೆಗೆ ಬೈಕ್ ರ‍್ಯಾಲಿ ಮೂಲಕ ಸಾಗಲಿದ್ದು, ಸಾರ್ವಜನಿಕರಿಗೆ ಹಾಗೂ ರೈತರಿಗೆ ಗಿಡ, ಮರ ಬೆಳೆಸುವ ಅರಿವು ಮೂಡಿಸಲಾಗುತ್ತಿದೆ ಎಂದು ಸದ್ಗುರು ಹೇಳಿದರು.

ಈ ಸಂದರ್ಭ ಹಾಜರಿದ್ದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕಾವೇರಿ ನದಿ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಸದ್ಗುರುಗಳು ಇದಕ್ಕೆ ಪೂರಕವಾಗಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಬಗ್ಗೆ ನೈಜ ಕಾಳಜಿ ಹೊಂದಿರುವ ಜನರಿದ್ದಾರೆ. ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಜನರ ಸಂಕಷ್ಟಗಳಿಗೆ ಎಲ್ಲರೂ ಸಹಕರಿಸುವ ಅಗತ್ಯವಿದೆ ಎಂದರು.

ಬೈಕ್ ಜಾಥಾದಲ್ಲಿ ಚಿತ್ರನಟರು
ಚಲನಚಿತ್ರ ನಟರಾದ ರಕ್ಷಿತ್ ಶೆಟ್ಟಿ, ದಿಗಂತ್, ಬಿಗ್‍ಬಾಸ್ ವಿಜೇತ ಶಶಿ ಬೈಕ್ ಜಾಥಾಗೆ ಸಾಥ್ ನೀಡುವುದರೊಂದಿಗೆ ಒಟ್ಟು 25 ಜನರ ತಂಡ ತಲಕಾವೇರಿಯಿಂದ ಭಾಗಮಂಡಲ ಮೂಲಕ ಮಡಿಕೇರಿ ಕಡೆಗೆ ತೆರಳಿತು. ಸದ್ಗುರುಗಳು ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ತಮ್ಮ ತಂಡದೊಂದಿಗೆ ಬೈಕ್ ಜಾಥಾದಲ್ಲಿ ತೆರಳಿದರು. ಕ್ಷೇತ್ರದ ಅರ್ಚಕರಾದ ನಾರಾಯಣ ಆಚಾರ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಸ್ಥಳೀಯ ಪ್ರಮುಖರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸದ್ಗುರು ಜಗ್ಗಿ ವಾಸುದೇವ್ ಮತ್ತು ತಂಡವನ್ನು ಬರಮಾಡಿಕೊಂಡು ಅಭಿಯಾನಕ್ಕೆ ಶುಭ ಹಾರೈಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X