ಬಿಎಸ್ವೈ ಬಂಧನದ ವೇಳೆ ಕಾಂಗ್ರೆಸ್ ವಿಜಯೋತ್ಸವ ಆಚರಿಸಿತ್ತು: ಶಾಸಕ ರೇಣುಕಾಚಾರ್ಯ

ಬೆಂಗಳೂರು, ಸೆ.4: ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ಬಂಧನ ಆಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸಿತ್ತು. ಆದರೆ, ನಾವು ಅಂತಹ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪನವರು ಜೈಲಿಗೆ ಹೋದಾಗ ಕಾಂಗ್ರೆಸ್ ನಾಯಕರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ, ಸಿಹಿ ಹಂಚಿದ್ದರು. ಆದರೆ, ಬಿಜೆಪಿ ಅಂತಹ ದ್ವೇಷದ ರಾಜಕಾರಣ ಮಾಡಲ್ಲ ಎಂದು ತಿಳಿಸಿದರು.
ಬಿಜೆಪಿ ಯಾವುದೇ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿಲ್ಲ. ಕಾನೂನು ರೀತಿ ಈಡಿ ಮತ್ತು ಸಿಬಿಐ ನಡೆದುಕೊಂಡಿದೆ ಎಂದು ಅವರು ತಿಳಿಸಿದರು.
Next Story