Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲಾ ಬಿಎಸ್‍ಪಿ ಪದಾಧಿಕಾರಿಗಳ...

ಕೊಡಗು ಜಿಲ್ಲಾ ಬಿಎಸ್‍ಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ4 Sept 2019 5:43 PM IST
share
ಕೊಡಗು ಜಿಲ್ಲಾ ಬಿಎಸ್‍ಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಮಡಿಕೇರಿ, ಸೆ.4: ಬಹುಜನ ಸಮಾಜ ಪಕ್ಷದಿಂದ ಮಾಜಿ ಸಚಿವ ಎನ್.ಮಹೇಶ್ ಅವರನ್ನು ಉಚ್ಛಾಟಿಸಿರುವುದು ಸೇರಿದಂತೆ, ಪಕ್ಷದ ರಾಜ್ಯಾಧ್ಯಕ್ಷರನ್ನು ಏಕಾಏಕಿ ಬದಲಾಯಿಸಿರುವ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಬಿಎಸ್‍ಪಿ ಪದಾಧಿಕಾರಿಗಳು ಹಾಗೂ ಸದಸ್ಯರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ, ಕೊಡಗು ಸೇರಿದಂತೆ ನೆರೆಯ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಬಿಎಸ್‍ಪಿ ಪದಾಧಿಕಾರಿಗಳು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ನಮ್ಮ ನಾಯಕರಾದ ಮಹೇಶ್ ಅವರು ತೆಗೆದುಕೊಳ್ಳುವ ನಿರ್ಧಾರದಂತೆ ಮುಂದಿನ ರಾಜಕೀಯ ಹೆಜ್ಜೆ ಇಡುವುದಾಗಿ ಸ್ಪಷ್ಟಪಡಿಸಿದರು.

ಮೈತ್ರಿ ಸರಕಾರದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವುದು ತಮಗೆ ಅತೀವ ನೋವನ್ನು ಉಂಟು ಮಾಡಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಕಳೆದ ಒಂದು ವರ್ಷದ ಅವಧಿಯಿಂದ ಕಾರ್ಯನಿರ್ವಹಿಸುತ್ತಿದ್ದ ಹರಿರಾಮ್ ಅವರನ್ನು ಏಕಾಏಕಿಯಾಗಿ, ಕನಿಷ್ಠ ಜಿಲ್ಲಾಧ್ಯಕ್ಷರುಗಳ ಗಮನಕ್ಕೂ ತಾರದೆ ಬದಲಾಯಿಸಲಾಗಿದೆ. ಈ ಎಲ್ಲಾ ವಿದ್ಯಮಾನಗಳಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಲಾಗುತ್ತಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಈಗಿನ ಬಿಎಸ್‍ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರಿಗೆ ಕಳುಹಿಸಿಕೊಡುತ್ತಿರುವುದಾಗಿ ತಿಳಿಸಿದರು.

ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಪ್ರೇಮ್‍ಕುಮಾರ್ ಮಾತನಾಡಿ, ಬಿಎಸ್‍ಪಿ ಪಕ್ಷದಲ್ಲಿ ಕಳೆದೆರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲಿ ತಾವು ರಾಜಕೀಯ ಪಕ್ಷ ಎನ್ನುವುದಕ್ಕಿಂತಲೂ ಮಿಗಿಲಾಗಿ ಬಿಎಸ್‍ಪಿಯನ್ನು ಒಂದು ಸಾಮಾಜಿಕ ಚಳವಳಿಯನ್ನಾಗಿ ಪರಿಗಣಿಸಿ ದುಡಿದಿದ್ದೇವೆ. ಆದರೆ, ಇತ್ತೀಚೆಗೆ ಪಕ್ಷವನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಕಾಣುತ್ತಿರುವ ಬೆಳವಣಿಗೆಗಳಿಂದ ಬಿಎಸ್‍ಪಿಯ ಚಳವಳಿಯ ಹಾದಿ ತಪ್ಪುತ್ತಿದೆ ಎಂದು ಟೀಕಿಸಿದರು. ಇಂತಹ ಬೆಳವಣಿಗೆಗಳ ನಡುವೆ ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವ ಕ್ರಮವನ್ನು ಖಂಡಿಸಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಎಸ್‍ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಇ. ಮಹಮ್ಮದ್ ಕುಂಞ, ಖಜಾಂಚಿ ದಿಲೀಪ್ ಕುಮಾರ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜಯರಾಜ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬೊಟ್ಟೋಳಂಡ ದೊರೆ ಮಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X