Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳದ ಶೇಖ್ ಆದಂ ಸಾಹೇಬ್‍ ರಿಗೆ...

ಬಂಟ್ವಾಳದ ಶೇಖ್ ಆದಂ ಸಾಹೇಬ್‍ ರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Sept 2019 6:13 PM IST
share
ಬಂಟ್ವಾಳದ ಶೇಖ್ ಆದಂ ಸಾಹೇಬ್‍ ರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬಂಟ್ವಾಳ, ಸೆ. 4: ಬಂಟ್ವಾಳ ತಾಲೂಕಿನ ಕಾವಳಪಡೂರು, ವಗ್ಗ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ, ಇಂಗ್ಲಿಷ್ ಭಾಷಾ ಶಿಕ್ಷಕ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಅವರು ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಿಂದ ರಾಜ್ಯದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ ಬಂಟ್ವಾಳದ ಶೇಖ್ ಆದಂ ಸಾಹೇಬ್ ಅವರೂ ಆಯ್ಕೆಯಾಗಿದ್ದಾರೆ. 

ಕಳೆದ 21 ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಮುಖ್ಯ ಶಿಕ್ಷಕ ಹುದ್ದೆ ಸಹಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮಕ್ಕಳು ಮತ್ತು ತಾನು ಸೇವೆ ಸಲ್ಲಿಸಿದ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಇವರು, ಈಗಾಗಲೇ ತಮ್ಮ ಶೈಕ್ಷಣಿಕ ಸಾಧನೆಗಾಗಿ ತಮ್ಮ ಶಾಲೆಗೆ ಹಾಗೂ ತಾವು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ.

ಇಂಗ್ಲಿಷ್ ಭಾಷಾ ಸ್ನಾತಕೋತ್ತರ ಪದವೀಧರರಾದ ಅವರು 1998ರಲ್ಲಿ ಗುರುಕಂಬಳ ಎ.ಕೆ.ಯು. ಹೆಣ್ಣುಮಕ್ಕಳ ಪಿಯು ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಶಿಕ್ಷಣ ವೃತ್ತಿ ಆರಂಭಿಸಿ, 2004ರಿಂದ ವಗ್ಗ ಸರಕಾರಿ ಪ್ರೌಢ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ 2012ರಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶೈಕ್ಷಣಿಕ ಕಾರ್ಯಕ್ರಮಗಳಾದ ಪ್ರತಿಭಾ ಪುರಸ್ಕಾರ, ವಲಯ ಮಟ್ಟದ ಪ್ರತಿಭಾ ಕಾರಂಜಿ, ಗೇಮ್ಸ್, ಶಾಲಾ ಬೆಳ್ಳಿ ಹಬ್ಬ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ತಾಲೂಕು ಮಟ್ಟದ ಸ್ಕೌಟ್ಸ್ ಗೈಡ್ಸ್ ರ್ಯಾಲಿ, ಆರೋಗ್ಯ ಶಿಬಿರ ಮೊದಲಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ನಡೆಸಿದ್ದಾರೆ.

ಪ್ರಶಸ್ತಿಗಳು

ಶಾಲೆಗೆ ಜಿಲ್ಲಾ ಮಟ್ಟದ ಪರಿಸರ ಮಿತ್ರ ಪ್ರಶಸ್ತಿ, ಹಳದಿ ಶಾಲೆ ಪ್ರಶಸ್ತಿ, ಕಿತ್ತಳೆ ಶಾಲೆ ಪ್ರಶಸ್ತಿ, 2016 ಮತ್ತು 2019ರಲ್ಲಿ ಎಸೆಸ್ಸೆಲ್ಸಿಯಲ್ಲಿ ಶೇ. ನೂರು ಫಲಿತಾಂಶ, ಶಿಕ್ಷಣ ಇಲಾಖೆಯಿಂದ ಉತ್ತಮ ಸಾಧನಾ ಪ್ರಶಸ್ತಿ, ಶಿಕ್ಷಣ ಮಂತ್ರಿಗಳ ಕಚೇರಿಯಿಂದ ಉತ್ತಮ ಮುಖ್ಯ ಶಿಕ್ಷಕ, ಉತ್ತಮ ಇಂಗ್ಲಿಷ್ ಭಾಷಾ ಸಾಧನಾ ಪ್ರಶಸ್ತಿ ಹಾಗೂ ಇನ್ನೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅದೇ ರೀತಿ 2017ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ 2018ರಲ್ಲಿ ಯೆನೆಪೋಯ ಉತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದಿರುತ್ತಾರೆ.

ಶಾಲೆಯ ಸಮಗ್ರ ಅಭಿವೃದ್ಧಿ

ದಾನಿಗಳ ಸಹಕಾರದಿಂದ ಶೌಚಾಲಯ, ಇಂಟರ್‍ಲಾಕ್, ಸಿಸಿ ಕ್ಯಾಮರಾ, ಶುದ್ಧೀಕರಿಸಿದ ಕುಡಿಯುವ ನೀರು, ಗೇಟ್, ಕಂಪ್ಯೂಟರ್, ಆವರಣ ಗೋಡೆ, ಸುಣ್ಣ ಬಣ್ಣ, ಬೋರ್‍ವೆಲ್, ಸೋಲಾರ್ ವ್ಯವಸ್ಥೆಯ ಸ್ಮಾರ್ಟ್ ಕ್ಲಾಸ್,ಸೌಂಡ್ ಸಿಸ್ಟಮ್, ಸಭಾಭವನ ವಿಸ್ತರಣೆ, ಬಾಲಕಿಯರ ಶೌಚಾಲಯಕ್ಕೆ ನ್ಯಾಪ್‍ಕೀನ್ ಬರ್ನರ್ ಅಳವಡಿಕೆ, ಶಾಲಾವನ, ಉತ್ತಮ ವಾಚನಾಲಯ, ಮಗು ಸ್ನೇಹಿ ವಾತಾವರಣದಿಂದ ವಗ್ಗ ಸರಕಾರಿ ಪ್ರೌಢಶಾಲೆಯ ಶಾಲೆಯ ಸಮಗ್ರ ಅಭಿವೃದ್ಧಿ ಸಾಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X