ಸೆ. 7ರಂದು ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಉಡುಪಿ, ಸೆ.4: 2019-20ನೇ ಸಾಲಿನ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.7ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುತ್ತಿದೆ. ಇದರಲ್ಲಿ ಭಾಗವಹಿಸಲಿಚ್ಛಿಸುವ ಸ್ಪರ್ಧಿಗಳು ಅದೇ ದಿನ ಬೆಳಗ್ಗೆ 9:00 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಸ್ಪರ್ಧೆಗಳ ವಿವರ: ಪುರುಷರಿಗೆ: ಅಥ್ಲೆಟಿಕ್ಸ್ (100ಮೀ., 200ಮೀ, 400ಮೀ, 800ಮೀ, 1500ಮೀ, 5000ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 100ಮೀ ರಿಲೇ, 400ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬ್ಬಡಿ, ಫುಟ್‌ಬಾಲ್.
ಮಹಿಳೆಯರಿಗೆ: ಅಥ್ಲೆಟಿಕ್ಸ್ (100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 100ಮೀ ರಿಲೇ, 400ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬ್ಬಡಿ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ (ದೂರವಾಣಿ ಸಂಖ್ಯೆ:0820-2521324, 9480886467) ಇವರನ್ನು ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.







