Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ನಿರಂತರ ಮಳೆ: ರೆಡ್ ಅಲರ್ಟ್...

ಕೊಡಗಿನಲ್ಲಿ ನಿರಂತರ ಮಳೆ: ರೆಡ್ ಅಲರ್ಟ್ ಘೋಷಣೆ- ಸೆ.5ರಂದು ಶಾಲಾ, ಕಾಲೇಜುಗಳಿಗೆ ರಜೆ

ವಾರ್ತಾಭಾರತಿವಾರ್ತಾಭಾರತಿ4 Sept 2019 7:55 PM IST
share
ಕೊಡಗಿನಲ್ಲಿ ನಿರಂತರ ಮಳೆ: ರೆಡ್ ಅಲರ್ಟ್ ಘೋಷಣೆ- ಸೆ.5ರಂದು ಶಾಲಾ, ಕಾಲೇಜುಗಳಿಗೆ ರಜೆ

ಮಡಿಕೇರಿ, ಸೆ.4: ಕೊಡಗು ಜಿಲ್ಲೆಯಲ್ಲಿ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ 'ರೆಡ್ ಅಲರ್ಟ್' ಘೋಷಣೆ ಮಾಡಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿತ್ತು. ಜೀವಹಾನಿ, ಜಾನುವಾರು ಹಾನಿ ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯಲ್ಲಿ ಮತ್ತೆ ಮಳೆಯ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. 

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟ್ರೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 08272-221077 ಹಾಗೂ ವ್ಯಾಟ್ಸ್ ಆಪ್ ನಂ. 8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆ ಬುಧವಾರ ತೀವ್ರತೆಯನ್ನು ಪಡೆದುಕೊಂಡಿದೆ. ಜೀವನದಿ ಕಾವೇರಿ ಮತ್ತೆ ಉಕ್ಕಿ ಹರಿಯಲಾರಂಭಿಸಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿರುವುದರಿಂದ ಭಾಗಮಂಡಲವನ್ನು ಸಂಪರ್ಕಿಸುವ ರಸ್ತೆಗಳು ಜಲಾವೃತಗೊಂಡಿವೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ಮಳೆಯ ತೀವ್ರತೆ ಇದೇ ರೀತಿ ಮುಂದುವರಿದಲ್ಲಿ ಭಾಗಮಂಡಲ ಮತ್ತೊಮ್ಮೆ ಸಂಪೂರ್ಣವಾಗಿ ಜಲಾವೃತಗೊಳ್ಳುವ ಆತಂಕ ಎದುರಾಗಿದೆ.

ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಳಲ್ಲಿ, ವೀರಾಜಪೇಟೆ, ಬಾಳೆಲೆ ವ್ಯಾಪ್ತಿಯಲ್ಲಿ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲೂ ನಿರಂತರವಾಗಿ ಮಳೆಯಾಗುತ್ತಿದೆ.

ಎಡೆಬಿಡದೆ ಸುರಿಯುತ್ತಿರುವ ಗಾಳಿ, ಮಳೆ ಮಳೆಯಿಂದ ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಡಿಕೇರಿ-ಮಂಗಳೂರು ಮುಖ್ಯ ರಸ್ತೆಯ ಜೋಡುಪಾಲದಲ್ಲಿ ಇಂದು ಬೆಳಗ್ಗೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದೆ.  ರಸ್ತೆಯ ಕೆಲವೆಡೆಗಳಲ್ಲಿ ಬರೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಮರ ಮತ್ತು ಮಣ್ಣನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಕ್ರಮ ಕೈಗೊಂಡರು.

ಜಿಲ್ಲೆಯ ನದಿಪಾತ್ರ ಹಾಗೂ ಬೆಟ್ಟಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ಅತಿವೃಷ್ಟಿ ಸಂದರ್ಭ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ತಂಡ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕಾರ್ಯೋನ್ಮುಖವಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X