ಮಂಗಳೂರು: ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ; 51 ಪ್ರತಿಭಟನಾಕಾರರ ಬಂಧನ-ಬಿಡುಗಡೆ

ಮಂಗಳೂರು, ಸೆ.4: ಕಾಂಗ್ರೆಸ್ ಮುಖಂಡ ಡಿಕೆಶಿ ಬಂಧನ ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ್ದ ಆರೋಪದಲ್ಲಿ ಪೊಲೀಸರು 51 ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದರು.
ಪ್ರತಿಭಟನಾನಿರತ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಸೇರಿದಂತೆ 51 ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆಗೊಳಿಸಲಾಯಿತು.
ಪ್ರತಿಭಟನಾಕಾರರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ 71ನೇ ವಿಧಿ ಅನ್ವಯ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





