ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ

ಮಂಗಳೂರು, ಸೆ.4: ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಬುಧವಾರ ಹಿಂದಿ ದಿನಾಚರಣೆ ಆಚರಿಸಲಾಯಿತು.
ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಮುರಳೀಧರ ನಾಕ್ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಉರುಳಿದರೂ ದೇಶದ ಅಧಿಕ ಮಂದಿ ಮಾತನಾಡುವ ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸದೆ ಇರುವುದು ಖೇದಕರ ಸಂಗತಿ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ವಹಿಸಿದ್ದರು. ಶಿಕ್ಷಕಿ ಚಿತ್ರಾ ಎಸ್. ಹಿಂದಿ ದಿನಾಚರಣೆಯ ಮಹತ್ವದ ಕುರಿತಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು. ಆರ್.ನಾಗರತ್ನಮ್ಮ ಅತಿಥಿಗಳನ್ನು ಪರಿಚಯಿಸಿದರು. ಸಾಲೊನಿ ಅತಿಥಿಗಳನ್ನು ಸ್ವಾಗತಿಸಿದರು. ಚಿರಂತನ ವಂದಿಸಿದರು.
Next Story







