ದಾವಣಗೆರೆ: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 21 ಮಂದಿ ಆಯ್ಕೆ

ದಾವಣಗೆರೆ, ಸೆ.4: 2019-20 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ 21 ಶಿಕ್ಷಕರು ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಿಂದ 14 ಹಾಗೂ ಪ್ರೌಢಶಾಲಾ ವಿಭಾಗದಿಂದ 7 ಸೇರಿ ಒಟ್ಟು 21 ಶಿಕ್ಷಕರು ಆಯ್ಕೆಯಾಗಿದ್ದು, ಆ ಶಿಕ್ಷಕರಿಗೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಸೆ.5 ರ ಬೆಳಗ್ಗೆ 10.30 ಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪ ಹದಡಿ ರಸ್ತೆ ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ.
ಕಿರಿಯ/ಹಿರಿಯ ಪ್ರಾಥಮಿಕ ಶಾಲಾ ವಿಭಾಗ:
ದಾವಣಗೆರೆ ಉತ್ತರ ವಲಯದ ಎಲೇಬೇತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿಮುಖ್ಯ ಶಿಕ್ಷಕ ಎಂ.ಶಿವಮೂರ್ತಿ, ಹೆಬ್ಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಹೆಚ್. ತಿಪ್ಪೇಸ್ವಾಮಿ, ದಾವಣಗೆರೆ ದಕ್ಷಿಣ ವಲಯದ ಹದಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಹೆಚ್ ಅಂಜಿನಪ್ಪ, ಚಿನ್ನಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಹೆಚ್.ಪೂರ್ಣಮ್ಮ, ಹರಿಹರ ತಾಲೂಕಿನ ಧೂಳೆಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ.ಮು.ಶಿ ಶರಣಕುಮಾರ ಆರ್ ಹೆಗಡೆ, ಕೊಂಡಜ್ಜಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ.ಮು.ಶಿ ಬಿ.ಹನುಮಂತಪ್ಪ, ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗುಲ್ನಾಜ್ ಪರ್ವಿನ್, ಕುರುವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚನ್ನೇಶ್ವರ ಎ.ಕೆ., ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಡ್ತಿ ಮುಖ್ಯ ಶಿಕ್ಷಕಿ ಕಮಲಮ್ಮ ಟಿ.ಎಸ್, ಕೆರೆಬಿಳಚಿ ಗ್ರಾಮದ ಸರ್ಕಾರಿ ಉರ್ದು ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯ ಸಹ ಶಿಕ್ಷಕ ಇಶ್ತಿಯಾಕ್ ಜಮೀಲ್, ಜಗಳೂರು ತಾಲೂಕಿನ ತಾರೇಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚನ್ನಪ್ಪ, ಗುರುಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ., ಹರಪನಹಳ್ಳಿ ತಾಲೂಕಿನ ವಾಸನತಾಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಿ.ಕೊಟ್ರೇಶ್, ಉಪ್ಪಾರಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲಕ್ಷ್ಮವ್ವ ಹೆಚ್ ರಂಗಣ್ಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗ:
ದಾವಣಗೆರೆ ಉತ್ತರ ವಲಯ ಕೆ.ಆರ್ ರಸ್ತೆಯ ಎಂ.ಎಂ.ಎಂ ಬಾಲಿಕಾ ಪ್ರೌಢಶಾಲೆಯ ಸಹ ಶಿಕ್ಷಕಿ ವೀಣಾ.ಜೆ, ದಾವಣಗೆರೆ ದಕ್ಷಿಣ ವಲಯ ಮಳಲಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಮಲ್ಲಪ್ಪ ಬಿರಾದಾರ, ಕಾಶೀಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಕೊಟ್ರೇಶಪ್ಪ ವಿ.ಬಿ. ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ಗೋವಿಂದಪ್ಪ ಅಗಸೀಬಾಗಿಲ, ಹೊನ್ನಾಳಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಸೀಮಾ.ಬಿ.ಜಿ., ಜಗಳೂರು ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಹಾಲಪ್ಪ ಡಿ.ಡಿ. ಜಗಳೂರು ಇವರು ಆಯ್ಕೆಯಾಗಿರುತ್ತಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







