Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮನೆ ಬಾಗಿಲಿಗೆ ಮದ್ಯ ಸರಬರಾಜು ಪ್ರಸ್ತಾವ...

ಮನೆ ಬಾಗಿಲಿಗೆ ಮದ್ಯ ಸರಬರಾಜು ಪ್ರಸ್ತಾವ ಕೈಬಿಟ್ಟ ಸರಕಾರ

ವಾರ್ತಾಭಾರತಿವಾರ್ತಾಭಾರತಿ5 Sept 2019 12:40 PM IST
share
ಮನೆ ಬಾಗಿಲಿಗೆ ಮದ್ಯ ಸರಬರಾಜು ಪ್ರಸ್ತಾವ ಕೈಬಿಟ್ಟ ಸರಕಾರ

ಬೆಂಗಳೂರು, ಸೆ. 5: ‘ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವ ಯಾವುದೇ ಪ್ರಸ್ತಾವ ರಾಜ್ಯ ಸರಕಾರದ ಮುಂದಿಲ್ಲ’ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದು, ನಿನ್ನೆಯಷ್ಟೇ ನೀಡಿದ್ದ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಿನ್ನೆ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಗುಜರಾತ್‌ನಲ್ಲಿ ಆನ್‌ಲೈನ್ ಮೂಲಕ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ವ್ಯವಸ್ಥೆಯನ್ನು ರಾಜ್ಯದಲ್ಲೂ ಜಾರಿಗೆ ತರಲು ಚಿಂತನೆ ನಡೆಸಲಾಗುವುದು ಎಂಬ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮನೆ-ಮನೆಗೂ ಮದ್ಯ ಪೂರೈಕೆ ಮಾಡುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ. ಕುಡಿತದಿಂದ ಸಂಸಾರಗಳು ಹಾಳಾಗುತ್ತಿದೆ ಎಂದು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆ-ಮನೆಗೂ ಮದ್ಯ ಸರಬರಾಜು ಮಾಡುವ ಉದ್ದೇಶ ಸರಕಾರಕ್ಕೆ ಇಲ್ಲ ಎಂದು ನಾಗೇಶ್ ಇದೇ ವೇಳೆ ತಿಳಿಸಿದರು.

ಅಚಾತುರ್ಯ: ಹೊಸದಾಗಿ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ನಿನ್ನೆ ನಡೆದ ಸಣ್ಣ ಅಚಾತುರ್ಯದಿಂದ ನನ್ನ ಹೇಳಿಕೆ ತಪ್ಪಾಗಿ ವರದಿಯಾಗಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಬೇಕಾದರೂ ಸಿಎಂ ಸೇರಿದಂತೆ ಉನ್ನತ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಮ್ಮ ಹೇಳಿಕೆ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರು ನನ್ನ ತಂದೆ ಸಮಾನರು. ಅವರೊಬ್ಬ ಹಿರಿಯ ಮುತ್ಸದ್ದಿ, ಹೀಗಾಗಿ ಅವರ ಅಭಿಪ್ರಾಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಪ್ರತಿಕ್ರಿಯಿಸಿದರು.

ಸಂಚಾರ ಮಳಿಗೆಯೂ ಇಲ್ಲ: ಕಳಭಟ್ಟಿ ಸಾರಾಯಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ರಾಜ್ಯದ ತಾಂಡಾಗಳಲ್ಲಿ ಸಂಚಾರ ಮದ್ಯ ಮಾರಾಟ ಮಳಿಗೆ ಸ್ಥಾಪಿಸುವ ಹೇಳಿಕೆಯನ್ನು ಹಿಂಪಡೆದಿರುವ ಸಚಿವ ನಾಗೇಶ್, ಸಂಚಾರ ಮದ್ಯ ಮಾರಾಟ ಮಳಿಗೆ ಸ್ಥಾಪಿಸುವ ಪ್ರಸ್ತಾವವೂ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕಳ್ಳಭಟ್ಟಿಯನ್ನು ನಿರ್ಮೂಲನೆ ಮಾಡಬೇಕೆಂಬ ದೃಢ ಸಂಕಲ್ಪ ನಮ್ಮ ಸರಕಾರದ್ದು. ಇದನ್ನು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಾಂಡಾ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಸ್ತ್ರೀ ಶಕ್ತಿ ಗುಂಪುಗಳು ಕೈಗೊಂಡಿರುವ ಹೋರಾಟಕ್ಕೆ ನಮ್ಮ ಬೆಂಬಲವೂ ಇರುತ್ತದೆ. ಹೆಣ್ಣು ಮಕ್ಕಳ ಹಿತರಕ್ಷಣೆಯೂ ರಾಜ್ಯ ಸರಕಾರ ಜವಾಬ್ದಾರಿಯಾಗಿದೆ. ಹೀಗಾಗಿ ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

‘ಆನ್‌ಲೈನ್ ಮೂಲಕ ಮನೆ-ಮನೆಗೆ ಮದ್ಯ ಮಾರಾಟ ಮಾಡುವ ಪ್ರಸ್ತಾವ ಸರಕಾರದ ಮುಂದಿಲ್ಲ. ಆನ್‌ಲೈನ್ ಮದ್ಯ ಮಾರಾಟ ವ್ಯವಸ್ಥೆ ಜಾರಿ ಮಾಡುವುದಿಲ್ಲ. ಗುಜರಾತ್, ಮಹಾರಾಷ್ಟ್ರದಲ್ಲಿ ಆನ್‌ಲೈನ್ ವ್ಯವಸ್ಥೆ ಮಾರಾಟ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದ್ದೇ. ಆದರೆ, ರಾಜ್ಯದಲ್ಲಿ ಆನ್‌ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಮಾಹಿತಿ ಕೊರತೆ ಹಿನ್ನೆಲೆಯಲ್ಲಿ ನಿನ್ನೆ ನಾನು ನೀಡಿದ್ದ ಹೇಳಿಕೆಗೆ ಕ್ಷಮೆ ಕೋರುವೆ’

-ಎಚ್.ನಾಗೇಶ್, ಅಬಕಾರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X