'ಅರಿವು' ಯೋಜನೆಯಡಿ ಅರ್ಜಿ ಆಹ್ವಾನ
ಬೆಂಗಳೂರು, ಸೆ.5: ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಒದಗಿಸಲು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಆಯಾ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಪಡೆದು, ಸೆ,16ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-23539600 ಅನ್ನು ಸಂಪರ್ಕಿಸಬಹುದು.
Next Story





