ಟೆಸ್ಟ್ ಕ್ರಿಕೆಟ್‌ಗೆ ಮುಹಮ್ಮದ್ ನಬಿ ವಿದಾಯ

ಚಿತ್ತಗಾಂಗ್, ಸೆ.6: ಅಫ್ಘಾನಿಸ್ತಾನದ ಆಲ್‌ರೌಂಡರ್ ಮುಹಮ್ಮದ್ ನಬಿ ಈಗ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ಬಳಿಕ ತನ್ನ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ.
‘‘ಹೌದು, ನಬಿ ಅವರು ಈಗ ನಡೆಯುತ್ತಿರುವ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದಾರೆ’’ ಎಂದು ಅಫ್ಘಾನಿಸ್ತಾನದ ಟೀಮ್ ಮ್ಯಾನೇಜರ್ ನಝಿಂ ಅಬ್ದುರ್ರಹೀಂಝೈ ಹೇಳಿದ್ದಾರೆ.
ಈಗ ನಡೆಯುತ್ತಿರುವ ಟೆಸ್ಟ್ ಪಂದ್ಯ ಸಹಿತ 34ರ ಹರೆಯದ ನಬಿ ಈ ತನಕ 3 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. ಅಫ್ಘಾನ್ ತಂಡ ನ.27ರಂದು ಡೆಹ್ರಾಡೂನ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನಾಡಲಿದೆ.
ಬಲಗೈ ಬ್ಯಾಟ್ಸ್‌ಮನ್ ಹಾಗೂ ಆಫ್ ಸ್ಪಿನ್ನರ್ ಆಗಿರುವ ನಬಿ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಉತ್ತಮ ಬೌಲರ್ ಆಗಿದ್ದು, ಮುಂದಿನ ವರ್ಷ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ತಂಡದಲ್ಲಿ ಪ್ರಮುಖ ಆಟಗಾರ ನಾಗಿದ್ದಾರೆ.
Next Story





