Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿಯಲ್ಲಿ ಮಳೆ ಶಾಂತ: ದಕ್ಷಿಣ...

ಮಡಿಕೇರಿಯಲ್ಲಿ ಮಳೆ ಶಾಂತ: ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಭಾರೀ ವರ್ಷಧಾರೆ

ವಾರ್ತಾಭಾರತಿವಾರ್ತಾಭಾರತಿ6 Sept 2019 11:40 PM IST
share
ಮಡಿಕೇರಿಯಲ್ಲಿ ಮಳೆ ಶಾಂತ: ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಭಾರೀ ವರ್ಷಧಾರೆ

ಮಡಿಕೇರಿ, ಸೆ.6: ಕಳೆದ ನಾಲ್ಕು ದಿನಗಳಿಂದ ಕೊಡಗಿನಾದ್ಯಂತ ಮತ್ತೆ ಪ್ರವಾಹದ ಆತಂಕ ಸೃಷ್ಟಿಸಿದ್ದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಮಳೆ ಶಾಂತವಾಗಿದ್ದರೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ದಕ್ಷಿಣ ಕೊಡಗಿನ ಭಾಗಗಳಲ್ಲಿ ಭಾರೀ ಮಳೆಯಿಂದ ಲಕ್ಷ್ಮಣತೀರ್ಥ ಮತ್ತು ಕೇರಳದತ್ತ ಸಾಗುವ ಬರಪ್ಪೊಳೆ ಉಕ್ಕಿ ಹರಿಯುತ್ತಿದ್ದು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ತಿಳಿ ಬಿಸಿಲಿನ ವಾತಾವರಣ ಕಂಡು ಬಂದಿತ್ತಾದರೂ ಸೋಮವಾರಪೇಟೆಯಲ್ಲಿ ಬಿಸಿಲು ಕಾಣದೆ ವಾರವೇ ಕಳೆದಿದೆ.

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದೊಂದು ದಿನದ ಅವಧಿಯಲ್ಲಿ 4 ಇಂಚು ಮಳೆ ದಾಖಲಾಗಿದೆ. ಶುಕ್ರವಾರ ಮಳೆಯ ತೀವ್ರತೆ ಇಳಿಮುಖಗೊಂಡು ಮಡಿಕೇರಿ ರಸ್ತೆಯ ಮೇಲೆ ಹರಿಯುತ್ತಿದ್ದ ಪ್ರವಾಹದ ನೀರು ಇಳಿದು ಸಂಚಾರ ಪುನರಾರಂಭಗೊಂಡಿದೆ. ನಾಪೋಕ್ಲು ರಸ್ತೆಯಲ್ಲಿ ಪ್ರವಾಹದ ನೀರು ಇನ್ನಷ್ಟೆ ಇಳಿಯಬೇಕಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿನ್ನೆ ಬೆಳಗ್ಗಿನಿಂದ ಇಂದು ಬೆಳಗ್ಗಿನವರೆಗೆ ಒಂದು ಇಂಚು ಮಳೆ ದಾಖಲಾಗಿದ್ದರೆ, ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಲ್ಲಿ ಅಲ್ಪಸ್ವಲ್ಪ ಮಳೆಯಷ್ಟೆ ಆಗುತ್ತಿರುವ ಬಗ್ಗೆ ವರದಿಯಾಗಿದೆ.

ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ, ಪೊನ್ನಂಪೇಟೆಗಳಲ್ಲಿ ಮಳೆ ಕ್ಷೀಣಿಸಿದ್ದರೆ, ಬಾಳೆಲೆ, ಹುದಿಕೇರಿ, ಶ್ರೀಮಂಗಲ ವಿಭಾಗಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಲಕ್ಷ್ಮಣ ತೀರ್ಥ ನದಿಯ ನೀರಿನ ಮಟ್ಟ ಹೆಚ್ಚುತ್ತಿದ್ದು, ಗದ್ದೆ ಬಯಲುಗಳು ಪ್ರವಾಹದಿಂದ ಆವೃತ್ತವಾಗಿದೆ. ಬರಪ್ಪೊಳೆಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಸಿದ್ದಾಪುರದ ಕರಡಿಗೋಡು ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿವೆ.

ಸೋಮವಾರಪೇಟೆಯ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ ವಿಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X