ಬಡಗಬೆಟ್ಟು ಸೊಸೈಟಿಗೆ ‘ಸಾಧನಾ ಪ್ರಶಸ್ತಿ’ ಪ್ರದಾನ

ಉಡುಪಿ, ಸೆ.7: ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿರುವ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗೆ ಇತ್ತೀಚೆಗೆ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 13ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವ ತೋಮುಖ ಅಭಿವೃದ್ಧಿಗಾಗಿ ‘ಸಾಧನಾ ಪ್ರಶಸ್ತಿ -2019’ನ್ನು ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಬ್ಯಾಂಕಿನ ನಿರ್ದೇಶಕರ ಉಪಸ್ಥಿತಿ ಯಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಎಸ್. ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯ್ಷರಾದ ಎಲ್.ಉಮಾನಾಥ್ ಹಾಜರಿದ್ದರು.
Next Story





