ಮಾಣಿಯಲ್ಲಿ ಸರಣಿ ಅಪಘಾತ: ಬೈಕ್ ಸವಾರನಿಗೆ ಗಾಯ

ಬಂಟ್ವಾಳ : ಎರಡು ದ್ವಿಚಕ್ರ ವಾಹನ ಹಾಗೂ ಓಮ್ನಿ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರ, ಓಮ್ನಿ ಚಾಲಕ ಗಾಯ ಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಸಮೀಪದ ಮಾಣಿಯಲ್ಲಿ ಶನಿವಾರ ಸಂಭವಿಸಿದೆ.
ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಸವಾರನು ಎದುರಿನಿಂದ ಮಹಿಳೆಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ದ್ವಿಚಕ್ರ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿದಾಗ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಮಧ್ಯೆಕ್ಕೆ ಚಲಿಸಿದೆ. ಈ ಸಂದರ್ಭ ಎದುರಿನಿಂದ ಬಂದ ಓಮ್ನಿ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ದ್ವಿಚಕ್ರ ವಾಹನದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಬೈಕ್ ಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





