ಅಲ್ ಅಮೀನ್ ಎಜುಕೇಶನ್ ಸೊಸೈಟಿ, ನಾರಿ ಫೌಂಡೇಶನ್ ನಿಂದ ಉಚಿತ ವೈದ್ಯಕೀಯ ಶಿಬಿರ

ಬೆಂಗಳೂರು, ಸೆ.7: ಅಲ್ ಅಮೀನ್ ಎಜುಕೇಶನ್ ಸೊಸೈಟಿ, ನಾರಿ ಫೌಂಡೇಶನ್ ಸಹಯೋಗದೊಂದಿಗೆ ನಗರದ ಲಾಲ್ ಬಾಗ್ ರಸ್ತೆಯ ಅಲ್ ಅಮೀನ್ ಕಾಲೇಜು ಆವರಣದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷೆ ಫಾತಿಮಾ ತಬಸ್ಸಮ್, ದುಬಾರಿ ವೆಚ್ಚದ ವೈದ್ಯಕೀಯ ವ್ಯವಸ್ಥೆಯಲ್ಲಿ ರೋಗಿಗಳು ಆರ್ಥಿಕ, ಮಾನಸಿಕ, ದೈಹಿಕ ಹಿಂಸೆಗೆ ತುತ್ತಾಗುತ್ತಿದ್ದಾರೆ. ಇಂತಹ ಉಚಿತ ಶಿಬಿರಗಳಿಂದ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಥೈರಾಯ್ಡ್, ಸ್ತನ ಕ್ಯಾನ್ಸರ್ ಸೇರಿದಂತೆ 450ಕ್ಕೂ ಹೆಚ್ಚು ಮಂದಿ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡಿದ್ದರು. ವೈದ್ಯರಾದ ಡಾ.ಸುಭಾನ್ ಶರೀಫ್, ಡಾ.ಬಿ.ಎಂ.ಝಾಕೀರ್, ಕಾಲೇಜಿನ ಪ್ರಾಂಶುಪಾಲ ಡಾ.ವಸೀಮ್ ಖಾನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Next Story