ಕಾಶ್ಮೀರ ವಿವಾದ: ಅಮೆರಿಕದ ನಿಲುವು ಏನು ಗೊತ್ತೇ ?

ವಾಷಿಂಗ್ಟನ್: ಕಾಶ್ಮೀರ ವಿವಾದ ಬಗೆಹರಿಸುವ ಸಂಬಂಧ ಭಾರತ ಹಾಗೂ ಪಾಕಿಸ್ತಾನ ಪರಸ್ಪರ ನೇರ ಮಾತುಕತೆ ನಡೆಸಬೇಕು ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಇದರೊಂದಿಗೆ ಕಾಶ್ಮೀರ ಮತ್ತು ಇತರ ವಿಚಾರಗಳ ಬಗ್ಗೆ ಉಭಯ ದೇಶಗಳ ನಡುವಿನ ಮಾತುಕತೆಗೆ ಅಮೆರಿಕ ಅಥವಾ ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರತಿಪಾದಿಸುತ್ತಾ ಬಂದ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆಯಾಗಿದೆ.
ಆರಂಭದಲ್ಲಿ ಅಮೆರಿಕ ಮಧ್ಯಸ್ಥಿಕೆ ಬಗ್ಗೆ ಟ್ರಂಪ್ ಗೊಂದಲದ ಹೇಳಿಕೆ ನೀಡಿದ್ದರು. ಆದರೆ ಇದೀಗ, ಕಾಶ್ಮೀರ ವಿಚಾರದಲ್ಲಿ ನಮ್ಮ ನಿರ್ಧಾರ ಅಚಲ. ಇದು ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯವಾಗಿ ಬಗೆಹರಿಸಿಕೊಳ್ಳಬೇಕಾದ ವಿಷಯವೇ ವಿನಃ ಬಾಹ್ಯ ಹಸ್ತಕ್ಷೇಪದ ಮೂಲಕ ಇದು ಸಾಧ್ಯವಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
"ಭಾರತ ಹಾಗೂ ಪಾಕಿಸ್ತಾನದ ನಡುವಿನ ನೇರ ಮಾತುಕತೆಯನ್ನು ಅಮೆರಿಕ ಬೆಂಬಲಿಸುತ್ತದೆ. ಇದನ್ನು ಮಸ್ಸಿಂಗಾ ಅವರು ಯುಎಸ್‌ಸಿಎಂಒ ನಾಯಕರ ಜತೆ ಇತ್ತೀಚೆಗೆ ನಡೆಸಿದ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ" ಎಂದು ಮಸ್ಸಿಂಗಾ ಅವರ ಹಿರಿಯ ಅಧಿಕಾರಿ ಹಾಗೂ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳ ರಾಜತಾಂತ್ರಿಕ ಅಧಿಕಾರಿ ಅಲೆಸಿ ಜಿ ವೇಲ್ಸ್ ಟ್ವೀಟ್ ಮಾಡಿದ್ದಾರೆ.





