Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮುಟ್ಟುಗೋಲು ಹಾಕಿಕೊಂಡ ಮರಳು...

ಮಂಗಳೂರು: ಮುಟ್ಟುಗೋಲು ಹಾಕಿಕೊಂಡ ಮರಳು ವಿತರಣೆಯಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Sept 2019 7:34 PM IST
share
ಮಂಗಳೂರು: ಮುಟ್ಟುಗೋಲು ಹಾಕಿಕೊಂಡ ಮರಳು ವಿತರಣೆಯಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮಂಗಳೂರು, ಸೆ. 8: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ತಡೆ ಹೆಸರಿನಲ್ಲಿ ದಾಸ್ತಾನು ಮಾಡಲಾದ ಮರಳನ್ನು ವಿತರಣೆ ಮಾಡುವಲ್ಲಿ ಅವ್ಯವಹಾರ ನಡೆದಿದೆ, ಈ ಬಗ್ಗೆ ತನಿಖೆಯಾಗಬೇಕು. ಇದರಿಂದ ಜನಸಾಮಾನ್ಯರು, ಲಾರಿ ಮಾಲಕರು ಮತ್ತು ಮರಳು ಉದ್ಯಮದಲ್ಲಿ ತೊಡಗಿರುವವರು ತೊಂದರೆಗೊಳಗಾಗಿದ್ದಾರೆ ಎಂದು ಎನ್. ಜೈರಾಜ್ ಶೆಟ್ಟಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಲಾರಿ ಮಾಲಕರ ಸಂಘಗಳ ಒಕ್ಕೂಟ ಮತ್ತು ಮರಳು ಗುತ್ತಿಗೆದಾರರು, ಹೊಗೈ ದೋಣಿ ಮಾಲಕರು, ಕಾರ್ಮಿಕರು ಮತ್ತು ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಮಾಲಕರ ಜಂಟಿ ಕ್ರೀಯಾ ಸಮಿತಿಯ ಅಧ್ಯಕ್ಷ ಎನ್. ಜೈರಾಜ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬೇರೆ ಬೇರೆ ಕಡೆ ದಾಸ್ತಾನು ಮಾಡಿದ ಮರಳನ್ನು ಸಾವಿರಾರು ಲಾರಿಗಳಷ್ಟು ವಶಪಡಿಸಿಕೊಂಡು ಮರಳು ವಿತರಣೆಯಲ್ಲಿ ಅವ್ಯವಹಾರ ನಡೆದಿದೆ. ಇದರಲ್ಲಿ ರಾಜಕಾರಣಿಗಳು, ಜಿಲ್ಲಾಡಳಿತದ ವರಿಷ್ಠಾಧಿಕಾರಿಗಳು ಶಾಮೀಲಾಗಿರುವ ಗುಮಾನಿ ಇದೆ. ಈ ಬಗ್ಗೆ ಲೋಕಾಯುಕ್ತ ಮತ್ತು ಸಂಬಂಧ ಪಟ್ಟ ಪ್ರಾಧಿಕಾರದ ಮುಂದೆ ದೂರು ದಾಖಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿಆರ್‌ಝಡ್ ವಲಯದಲ್ಲಿ ತಾತ್ಕಾಲಿಕ ಮರಳು ದಿಬ್ಬವನ್ನು ತೆರವುಗೊಳಿಸಲು ಪರವಾನಿಗೆ ನೀಡುವ ಸಂದರ್ಭ 2011-12ನೆ ಸಾಲಿನಲ್ಲಿ ಹಾಗೂ ಅದಕ್ಕೂ ಮೊದಲು ಕನಿಷ್ಠ ಮೂರು ವರ್ಷಗಳ ಕಾಲ ಮರಳು ತೆಗೆಯುವಲ್ಲಿ ಸಕ್ರಿಯವಾಗಿದ್ದವರನ್ನು ಸಾಂಪ್ರದಾಯಿಕ ಕರಾವಳಿ ಸಮುದಾಯ ಎಂದು ಪರಿಗಣಿಸಿ ಪರವಾನಿಗೆ ನೀಡುವಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಮರಳು ಸಮಿತಿ ವಿಫಲವಾಗಿತ್ತು ಮತ್ತು ಅರ್ಹತೆ ಇರುವವರನ್ನು ಕಡೆಗಣಿಸಲಾಗಿದೆ. ಮರಳು ದಿಬ್ಬಗಳ ತೆರವಿಗೆ ಪರವಾನಿಗೆ ಯಲ್ಲಿ ಒಂದೇ ಕುಟುಂಬದ 2-3 ಸದಸ್ಯರಿಗೆ ಟಿ.ಪಿ ವಿತರಿಸಲಾಗಿದೆ. ಉಚ್ಛನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ. ಮರವೂರು ಡ್ಯಾಮ್‌ನಿಂದ ಮಳವೂರಿನವರೆಗಿನ ನದಿ ಭಾಗದಲ್ಲಿ ಮರಳುಗಾರಿಕೆ ಸ್ಥಗಿತದಿಂದಾಗಿ ಮರಳು ಗಾರಿಕೆಯ ವೃತ್ತಿಯಲ್ಲಿ ತೊಡಗಿರುವವರಿಗೆ ತೊಂದರಯಾಗಿದೆ. ಮಂಗಳೂರು ತಾಲೂಕು ಹಳೆಯಂಗಡಿ ಗ್ರಾಮದಲ್ಲಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಹೊಳೆತ್ತಿ ಸಂಗ್ರಹಿಸಿದ್ದ ಸುಮಾರು 10 ಸಾವಿರ ಮೆಟ್ರಿಕ್ ಟನ್ ಮರಳನ್ನು ತ್ವರಿತವಾಗಿ ವಿಲೇವಾರಿ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಸೂಕ್ತ ತನಿಖೆ ಮಾಡುವಲ್ಲಿ ವಿಫಲರಾಗಿದ್ದಾರೆ. ಮರಳು ಸಾಗಾಟದ ಲಾರಿಗಳಿಗೆ ಜಿಪಿಎಸ್ ಅಳವಡಿಕೆಗೆ ಪಾರದರ್ಶಕವಾದ ರೀತಿಯ ಟೆಂಡರ್ ನಡೆದಿಲ್ಲಾ. ದ.ಕ ಜಿಲ್ಲೆಯಲ್ಲಿ ಮರಳು ಸರಬರಾಜು ಮತ್ತು ವಿತರಣೆಗೆ ಆ್ಯಪ್ ಅಳವಡಿಸಲಾಗಿದ್ದರೂ ಮರಳಿನ ಅಭಾವ ಸೃಷ್ಟಿಯಾಗಿದೆ. ಆದರೆ ಈ ಆ್ಯಪ್ ನಿರ್ವಹಣೆಯಲ್ಲೂ ಸಾಕಷ್ಟು ಲೋಪಗಳಿವೆ ಈ ಬಗ್ಗೆಯೂ ತನಿಖೆಯಾಗಬೇಕು. ಪಣಂಬೂರು ಎಸಿಪಿಯವರ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಸಮರ್ಪಕವಾದ ರೀತಿಯ ಕಡಿವಾಣ ಹಾಕಲಾಗಿದೆ. ಅಲ್ಲಿ ಪರವಾನಿಗೆ ಇರುವವರಿಗೆ ಮರಳುಗಾರಿಕೆ ನಡೆಸಲು ಸಮಸ್ಯೆಯಾಗುತ್ತಿಲ್ಲ. ಉಳಿದ ಕಡೆ ಮರಳು ಗಾರಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಮರಳು ವಿತರಣೆಯ ಸಮಸ್ಯೆಯನ್ನು ಸರಿಪಡಿಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೈರಾಜ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಸುರೇಂದ್ರ ಕಂಬಳಿ, ಪಿ. ಗೋಪಾಲಕೃಷ್ಣ ಭಟ್, ಹಲ್ಯಾರ ಇಕ್ಬಾಲ್, ಪ್ರಧಾನ ಕಾರ್ಯದರ್ಶಿ ಗಳಾದ ಸುನೀಲ್ ಫೆರ್ನಾಂಡಿಸ್, ಯುಸೂಫ್ ಉಳಾಯಿ ಬೆಟ್ಟು, ಸಲಹೆಗಾರ ಬಿ.ಎಸ್.ಚಂದ್ರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X