ನೇಣು ಬಿಗಿದು ನೌಕರ ಆತ್ಮಹತ್ಯೆ
ಬೆಂಗಳೂರು, ಸೆ.8: ಪಬ್‌ನಲ್ಲಿ ಕೆಲಸ ಮಾಡುತ್ತಿದ್ದ ಮಣಿಪುರ ಮೂಲದ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಣಿಪುರದ ಮಾಯಾ ಜೆ.ಸಿಂಗ್ (19) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ ಎಂದು ಪೊಲೀಸರು ಗುರುತಿಸಿದ್ದಾರೆ.
ಶನಿವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇವರ ಜೊತೆಗಿದ್ದ ನೌಕರರು, ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿ ಕೊಂಡಿರುವ ವಿವೇಕನಗರ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
Next Story