ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು
ಮಂಗಳೂರು, ಸೆ.8: ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲೀಲಾ (60) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸಮೀಪದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಆ್ಯಂಬುಲೆನ್ಸ್ ಸಹಾಯದಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಚಹರೆ: 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೆಂಪು ರವಿಕೆ ಮತ್ತು ಕೇಸರಿ ಲಂಗ ಧರಿಸಿದ್ದಾರೆ. ಮೃತ ಸಂಬಂಧಿಕರು ಇದ್ದಲ್ಲಿ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆ (0824- 2220518) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





