Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಕ್ಕಲಿಗರ ಪ್ರತಿಭಟನೆ: ಕಾನೂನು...

ಒಕ್ಕಲಿಗರ ಪ್ರತಿಭಟನೆ: ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ- ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ11 Sept 2019 8:39 PM IST
share
ಒಕ್ಕಲಿಗರ ಪ್ರತಿಭಟನೆ: ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ- ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಸೆ.11: ಜಾರಿ ನಿರ್ದೇಶನಾಲಯ(ಈ.ಡಿ.)ದ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿರುವುದನ್ನು ಖಂಡಿಸಿ ಒಕ್ಕಲಿಗರ ಸಂಘ, ಸಂಸ್ಥೆಗಳು ನಡೆಸಿದ ಬಹೃತ್ ಪ್ರತಿಭಟನೆಯಿಂದಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಆಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ. ನಗರದ ಯಾವುದೇ ಭಾಗದಲ್ಲಿ ಅಹಿತಕರ ಘಟನೆಗಳು ನಡೆದಿರುವ ಕುರಿತು ವರದಿಯಾಗಿಲ್ಲ ಎಂದರು.

ಪ್ರತಿಭಟನೆಗೆ ಕರೆ ಕೊಟ್ಟವರು ಶಾಂತಿ ಕಾಪಾಡಿದ್ದಾರೆ. ಅದಕ್ಕಾಗಿ ಅವರಿಗೆಲ್ಲ ಧನ್ಯವಾದಗಳನ್ನು ತಿಳಿಸುತ್ತೇನೆ. ನಗರದ ಪೊಲೀಸರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದರು ಎಂದು ಅವರು ಹೇಳಿದರು.

ಜಯನಗರದ ಅಶೋಕ ಪಿಲ್ಲರ್ ಬಳಿ ಬಿಎಂಟಿಸಿ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವರು ಅಂತಹ ಯಾವುದೇ ಘಟನೆ ನಡೆದಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿಯವರು ಒಕ್ಕಲಿಗ ನಾಯಕರನ್ನು ಗುರಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದು ಸರಿ, ಯಾವುದು ತಪ್ಪು ಎಂದು ತಿಳಿದುಕೊಳ್ಳುವಷ್ಟು ಎಲ್ಲ ಸಮುದಾಯಗಳು ಪ್ರಬುದ್ಧವಾಗಿವೆ. ಯಾರನ್ನೂ ತಪ್ಪು ದಾರಿಗೆ ಎಳೆಯಲು ಸಾಧ್ಯವಿಲ್ಲ ಎಂದರು.

ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಯಾವ ಸಮುದಾಯವನ್ನು ಯಾರ ಮೇಲೂ ಸುಲಭವಾಗಿ ಎತ್ತಿ ಕಟ್ಟಲು ಸಾಧ್ಯವಾಗುವುದಿಲ್ಲ. ಪ್ರತಿಯೊಂದು ವಿಚಾರಗಳನ್ನು ವಿಮರ್ಶಿಸುವಷ್ಟು ಪ್ರೌಢಿಮೆ ಇಂದು ಎಲ್ಲ ಸಮುದಾಯಗಳಲ್ಲೂ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನೂತನ ಮೋಟಾರು ಕಾಯ್ದೆ ಜಾರಿಯಿಂದಾಗಿ ಸಂಚಾರ ನಿಯಮಗಳ ಉಲ್ಲಂಘನೆಗೆ ವಿಧಿಸುತ್ತಿರುವ ಭಾರಿ ಪ್ರಮಾಣದ ದಂಡವನ್ನು ಗುಜರಾತ್‌ನಲ್ಲಿ ಇಳಿಕೆ ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ದಂಡದ ಪ್ರಮಾಣ ಇಳಿಸಬೇಕೆಂಬ ವಿಚಾರ ಮುಖ್ಯಮಂತ್ರಿ ಗಮನದಲ್ಲಿದೆ ಎಂದು ಅವರು ತಿಳಿಸಿದರು.

ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಭಾರಿ ಪ್ರಮಾಣದ ದಂಡವನ್ನು ಇಳಿಸಬೇಕೆ, ಬೇಡವೇ ಎಂಬುದರ ಕುರಿತು ಮುಖ್ಯಮಂತ್ರಿ ಸ್ಪಷ್ಟne ನೀಡಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಳೆದ ಬಾರಿ ಹೊಸದಿಲ್ಲಿಗೆ ಹೋಗಿದ್ದಾಗ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಮಹಾದಾಯಿ ಜಲ ವಿವಾದ ಇತ್ಯರ್ಥ ಸಂಬಂಧ ಮನವಿ ಮಾಡಲಾಗಿತ್ತು. ಅವರೇ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದಾಗಿ ತಿಳಿಸಿದ್ದರು. ಆದುದರಿಂದ, ಈ ಬಗ್ಗೆ ಗೋವಾ ಮುಖ್ಯಮಂತ್ರಿಯನ್ನು ಭೇಟಿ ಮಾಡುವ ಮುನ್ನ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಬೇಕಿದೆ ಎಂದು ಅವರು ಹೇಳಿದರು.

ನಾನು ಗೋವಾ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಸಹ ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ. ಈಗಿರುವ ವ್ಯವಸ್ಥೆಯಲ್ಲಿ ಸ್ವಲ್ಪ ಹೊಸದರ ಬಗ್ಗೆ ಚಿಂತನೆ ಮಾಡಬೇಕಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X