Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಚಾರಿ ಪೊಲೀಸರು ಜಪ್ತಿ ಮಾಡಿದ ವಾಹನಗಳು...

ಸಂಚಾರಿ ಪೊಲೀಸರು ಜಪ್ತಿ ಮಾಡಿದ ವಾಹನಗಳು ಶೀಘ್ರ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ11 Sept 2019 9:02 PM IST
share

ಬೆಂಗಳೂರು, ಸೆ.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅನುದಾನದಲ್ಲಿ ಅಭಿವೃದ್ಧಿ ಪಡಿಸಿದ ಬಿಂಗೀಪುರದ ಭೂ ಭರ್ತಿ ಪ್ರದೇಶಕ್ಕೆ ನಗರದ ವಿವಿಧ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ಜಪ್ತಿ ಮಾಡಿ ನಿಲ್ಲಿಸಿರುವ ವಾಹನಗಳು ಶೀಘ್ರದಲ್ಲಿ ಸ್ಥಳಾಂತರಗೊಳ್ಳಲಿವೆ.

ಸುಮಾರು 23 ಎಕರೆ ಪ್ರದೇಶವಿರುವ ಬಿಂಗೀಪುರ ಭೂಭರ್ತಿ ಪ್ರದೇಶದಲ್ಲಿ ಪಾಲಿಕೆಯಿಂದ ಈಗಾಗಲೇ 4.50 ಎಕರೆ ಪ್ರದೇಶದಲ್ಲಿ ಟ್ರಿ ಪಾರ್ಕ್ ಅಭಿವೃದ್ಧಿ, ಎರಡು ಎಕರೆ ಜಾಗವನ್ನು ಗೋಶಾಲೆ ನಿರ್ಮಿಸಲು ಕಾಯ್ದಿರಿಸಲಾಗಿದೆ. ಇದೀಗ 10 ಎಕರೆ ಜಾಗವನ್ನು ಅನುಪಯುಕ್ತ ಹಾಗೂ ಜಪ್ತಿ ಮಾಡಿದ ವಾಹನಗಳನ್ನು ನಿಲುಗಡೆಗೆ ನಗರ ಸಂಚಾರಿ ಪೊಲೀಸರಿಗೆ ನೀಡಲಾಗುತ್ತಿದೆ.

ಕಳೆದ ಜೂನ್‌ನಲ್ಲಿ ಬಿಬಿಎಂಪಿ ಮೇಯರ್ ಹಾಗೂ ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಬಿಂಗೀಪುರ ಭೂಭರ್ತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದರು. ಈ ವೇಳೆ ಸಂಚಾರಿ ಪೊಲೀಸರು ನಗರದಲ್ಲಿ ಜಪ್ತಿ ಮಾಡಿದ ವಾಹನ ನಿಲ್ಲಿಸುವುದಕ್ಕೆ ಸ್ಥಳಾವಕಾಶ ನೀಡುವಂತೆ ಮನವಿ ಮಾಡಿದ್ದರು.

ಅದಕ್ಕೆ ಸ್ಪಂದಿಸಿದ್ದ ಮೇಯರ್ ಗಂಗಾಂಬಿಕೆ, ಬಿಂಗೀಪುರದ ಬಿಬಿಎಂಪಿಯ 23 ಭೂರ್ತಿ ಪ್ರದೇಶದಲ್ಲಿ 10 ಎಕರೆಯನ್ನು ಜಪ್ತಿ ಮಾಡಿದ ವಾಹನ ನಿಲ್ಲುಸುವುದರ ಜತೆಗೆ ಪಾಲಿಕೆಯ 6 ಕೋಟಿ ರೂ. ಅನುದಾನದಲ್ಲಿ 10 ಎಕರೆ ಪ್ರದೇಶವನ್ನು ಸಮತಟ್ಟುಗೊಳಿಸಿ ಕಾಂಪೌಂಡ್ ನಿರ್ಮಾಣ ಹಾಗೂ ಬೇಲಿ ಅಳವಡಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಬಿಬಿಎಂಪಿ ಅನುದಾನದಲ್ಲಿ ಕಾಮಗಾರಿ ನಡೆಸಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸುವುದಕ್ಕೆ ಮುಂದಾಗಿದೆ.

ನಗರದ ರಸ್ತೆ ಮತ್ತು ಪಾದಚಾರಿ ಮಾರ್ಗದಲ್ಲಿ ಜಪ್ತಿ ಮಾಡಿದ ವಾಹನ ನಿಲುಗಡೆಯಿಂದ ಸಂಚಾರಿ ದಟ್ಟಣೆ ಕಡಿಮೆ ಮಾಡುವ ಉದ್ದೆಶದಿಂದ ಜಾಗವನ್ನು ಪೊಲೀಸ್ ಇಲಾಖೆ ನೀಡಲಾಗುತ್ತಿದೆ. ಜತೆಗೆ ಬಿಬಿಎಂಪಿಯೇ 6 ಕೋಟಿ ರೂ. ವೆಚ್ಚ ಮಾಡಿ ಬಿಂಗೀಪುರ ಭೂಭರ್ತಿ ಪ್ರದೇಶಕ್ಕೆ ತಡೆಗೋಡೆ, ಜಪ್ತಿ ಮಾಡಿದ ವಾಹನ ನಿಲುಗಡೆ ಸ್ಥಳದಲ್ಲಿ ವಿದ್ಯುತ್ ದೀಪ, ಶೆಡ್ ನಿರ್ಮಿಸಿಕೊಡಲಾಗಿದೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಾಹಿತಿ ನೀಡಿದರು.

ಜಪ್ತಿ ವಾಹನಗಳ ಸ್ಥಳಾಂತರಕ್ಕೆ ಜಾಗ ನೀಡುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಅದರಂತೆ ಬಿಬಿಎಂಪಿ ಬಿಂಗೀಪುರದ ಭೂಭರ್ತಿ ಪ್ರದೇಶದ 10 ಎಕರೆ ನೀಡಿದೆ. ಎರಡು ಮೂರು ದಿನದಲ್ಲಿ ಭೂಭರ್ತಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಜಪ್ತಿ ಮಾಡಿದ ವಾಹನಗಳನ್ನು ಸ್ಥಳಾಂತರ ಕಾರ್ಯ ಆರಂಭಿಸಲಾಗುವುದು.

-ಬಿ.ಆರ್. ರವಿಕಾಂತೇಗೌಡ, ನಗರ ಸಂಚಾರಿ ಪೊಲೀಸ್ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X