ಗ್ಯಾಸ್ ಟ್ಯಾಂಕರ್ ಢಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರು, ಸೆ.12: ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪೀಣ್ಯಾದ ಮೇಲುಸೇತುವೆ ರಸ್ತೆಯಲ್ಲಿ ಗುರುವಾರ ನಡೆದಿದೆ. ಹೊಸಗುಡ್ಡದಹಳ್ಳಿಯ ಮಂಜುನಾಥನಗರ ನಿವಾಸಿ ಸಲ್ಮಾತಾಜ್(38) ಮೃತ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.
ಮಾದವಾರದ ಕೆಜಿಎಫ್ ಲಾಜಿಸ್ಟಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾತಾಜ್ ಅವರು, ಗುರುವಾರ ಬೆಳಗ್ಗೆ ಕೆಲಸಕ್ಕೆ ಸ್ಕೂಟರ್‌ನಲ್ಲಿ ಮನೆಯಿಂದ ಹೋಗುತ್ತಿದ್ದರು. ಮಾರ್ಗಮಧ್ಯೆ ಪೀಣ್ಯಾ ಮೇಲುಸೇತುವೆ ರಸ್ತೆಯ ಎಸ್‌ಆರ್‌ಎಸ್ ಬಳಿ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಅವರ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಪೀಣ್ಯಾ ಸಂಚಾರ ಪೊಲೀಸರು, ಗ್ಯಾಸ್ ಟ್ಯಾಂಕರ್ ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
Next Story





