ರೋಟಾವೈರಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು, ಸೆ.12: ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ರೋಟಾವೈರಸ್ ಲಸಿಕೆ ನೀಡಿಕೆಗೆ ಗುರುವಾರ ಚಾಲನೆ ನೀಡಲಾಯಿತು.
ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ವೆನ್ಲಾಕ್ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ರೋಟಾ ವೈರಾಸ್ ಲಸಿಕೆಯನ್ನು ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞೆ ಡಾ.ಶೈಲಜಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ, ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
Next Story





